ADVERTISEMENT

ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ ಕಮಿಷನರ್

​ಪ್ರಜಾವಾಣಿ ವಾರ್ತೆ
Published 5 ಜುಲೈ 2021, 21:55 IST
Last Updated 5 ಜುಲೈ 2021, 21:55 IST

ಬೆಂಗಳೂರು: ಲಾಕ್‌ಡೌನ್ ಸಡಿಲಿಕೆ ಮಾಡಿರುವ ಬೆನ್ನಲ್ಲೇ ಪೊಲೀಸ್ ಕಮಿಷನರ್ ಕಮಲ್ ಪಂತ್, ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಸೋಮವಾರ ಆದೇಶ ಹೊರಡಿಸಿದ್ದಾರೆ.

‘ನಗರದ ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕು ಜನರು ಗುಂಪು ಸೇರಿ ನಿಲ್ಲಬಾರದು. ನಗರದ ಬಸ್ ನಿಲ್ದಾಣ, ಮೆಟ್ರೊ, ರೈಲು ನಿಲ್ದಾಣಗಳಿಗೆ ಇದು ಅನ್ವಯವಾಗುವುದಿಲ್ಲ. ಉಳಿದಂತೆ ರಾಜ್ಯ ಸರ್ಕಾರದ ಎಲ್ಲ ನಿಯಮಗಳನ್ನು ಜನರು ಪಾಲಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT