ಬೆಂಗಳೂರು: ಗಲಭೆ ನಡೆದಿದ್ದ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್ ಭೈರಸಂದ್ರದ ರಸ್ತೆಯುದ್ದಕ್ಕೂ ಪೊಲೀಸರನ್ನು ನಿಯೋಜಿಸಲಾಗಿದೆ. ಇಡೀ ಪ್ರದೇಶ ಪೊಲೀಸರ ನಿಯಂತ್ರಣದಲ್ಲಿ ಇದೆ.
ಕಿಡಿಗೇಡಿಗಳು ಸುಟ್ಟು ಹಾಕಿರುವ ವಾಹನಗಳನ್ನು ಪೊಲೀಸರು ರಸ್ತೆ ಬದಿಯಲ್ಲಿ ಹಾಕಿದ್ದಾರೆ. ಇಡೀ ಪ್ರದೇಶದಲ್ಲಿ ವಾಹನಗಳ ಓಡಾಟ ಮಿತಿಗೊಳಿಸಲಾಗಿದ್ದು, ಪ್ರತಿಯೊಂದು ವಾಹನಗಳನ್ನು ತಪಾಸಣೆ ಮಾಡಿ ಬಿಡಲಾಗುತ್ತಿದೆ.
ಠಾಣೆಯಲ್ಲೇ ಮೊಕ್ಕಾಂ, 137ಕ್ಕೆ ಏರಿದ ಬಂಧಿತರ ಸಂಖ್ಯೆ;
ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಿರಿಯ ಅಧಿಕಾರಿಗಳು ಕೆ.ಜಿ.ಹಳ್ಳಿ ಠಾಣೆಯಲ್ಲೇ ಮೊಕ್ಕಾಂ ಹೂಡಿದ್ದಾರೆ.
ಗಳಭೆ ಸೃಷ್ಟಿಸಿದ ಆರೋಪಿಗಳ ಪತ್ತೆಗೆ ಶೋಧ ಮುಂದುವರಿದಿದೆ. ಇದುವರೆಗೂ 137 ಮಂದಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.