
ಪ್ರಜಾವಾಣಿ ವಾರ್ತೆ
ಬೆಂಗಳೂರು: ಕಾನೂನು ಬಾಹಿರ ಚಟುವಟಿಕೆ ತಡೆಯಲು ಹಾಗೂ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ನಗರದ ಪೊಲೀಸರು ಶನಿವಾರ ವಿಶೇಷ ಕಾರ್ಯಾಚರಣೆ ನಡೆಸಿದ್ದು, ತಪ್ಪಿತಸ್ಥರ ವಿರುದ್ಧ 3,667 ಪ್ರಕರಣ ದಾಖಲಿಸಿಕೊಂಡಿದ್ದಾರೆ.
‘ಮದ್ಯದಂಗಡಿಗಳು, ಬಾರ್ ಆ್ಯಂಡ್ ರೆಸ್ಟೊರೆಂಟ್, ಚಹಾ ಅಂಗಡಿ, ಲಾಡ್ಜ್, ಪೇಯಿಂಗ್ ಗೆಸ್ಟ್ (ಪಿ.ಜಿ) ಕಟ್ಟಡಗಳು ಹಾಗೂ ಇತರೆಡೆ ಶೋಧ ನಡೆಸಲಾಯಿತು. ಕಾನೂನು ಉಲ್ಲಂಘಿಸಿದ್ದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ನೋಟಿಸ್ ನೀಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘734 ರೌಡಿಗಳು ಹಾಗೂ ಅಪರಾಧ ಹಿನ್ನೆಲೆಯುಳ್ಳ 434 ಮಂದಿಯನ್ನೂ ವಿಚಾರಣೆಗೆ ಒಳಪಡಿಸಲಾಯಿತು. ಅಪರಾಧಗಳಲ್ಲಿ ತೊಡಗದಂತೆ ಎಚ್ಚರಿಕೆ ನೀಡಲಾಯಿತು. ಮದ್ಯ ಕುಡಿದು ವಾಹನ ಚಲಾಯಿಸುತ್ತಿದ್ದ 196 ಚಾಲಕರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡು, ವಾಹನ ಜಪ್ತಿ ಮಾಡಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.