ADVERTISEMENT

ಬೆಂಗಳೂರು | ಸೋಂಕಿತ ಪೊಲೀಸರ ಚಿಕಿತ್ಸೆಗೆ ಆಸ್ಪತ್ರೆ ನಿಗದಿ

​ಪ್ರಜಾವಾಣಿ ವಾರ್ತೆ
Published 26 ಜೂನ್ 2020, 6:15 IST
Last Updated 26 ಜೂನ್ 2020, 6:15 IST
   

ಬೆಂಗಳೂರು: ಕೊರೊನಾ ಸೋಂಕಿತ ಪೊಲೀಸರಿಗೆ ಚಿಕಿತ್ಸೆ ನೀಡಲು ನಗರದಲ್ಲಿ ಪ್ರತ್ಯೇಕ ಆಸ್ಪತ್ರೆಗಳನ್ನು ನಿಗದಿಗೊಳಿಸಲಾಗಿದೆ.

ನಗರದ ವಿಕ್ರಮ್ ಆಸ್ಪತ್ರೆ, ಎಂ.ಎಸ್.ರಾಮಯ್ಯ, ಬಿಜಿಎಸ್ ಗ್ಲೋಬಲ್ ಆಸ್ಪತ್ರೆ, ಸೇಂಟ್ ಜಾನ್ಸ್‌ ಆಸ್ಪತ್ರೆ ಹಾಗೂ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ಪೊಲೀಸರ ಚಿಕಿತ್ಸೆಗೆಂದು ವಿಶೇಷ ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ.

ಪ್ರತಿಯೊಂದು ಆಸ್ಪತ್ರೆಯಲ್ಲೂ ಸಾರ್ವಜನಿಕರ ಸಂಪರ್ಕ ಅಧಿಕಾರಿ ಹಾಗೂ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಕೊರೊನಾ ಪಾಸಿಟೀವ್ ಬರುವ ಪೊಲೀಸರನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಿದ್ದಾರೆ.

ADVERTISEMENT

ಇತ್ತೀಚೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಮರ್ಪಕ ಊಟ ಹಾಗೂ ಚಿಕಿತ್ಸೆ ಇಲ್ಲವೆಂದು ಪೊಲೀಸರು ಆರೋಪಿಸಿದ್ದರು. ಇದೇ ಕಾರಣಕ್ಕೆ ರಾಜ್ಯ ಸರ್ಕಾರ, ಪೊಲೀಸರಿಗೆ ಪ್ರತ್ಯೇಕ ಆಸ್ಪತ್ರೆ ಕಾಯ್ದಿರಿಸಿದೆ. ಊಟ ಹಾಗೂ ಮೂಲ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.