
ಬಂಧನ (ಸಾಂದರ್ಭಿಕ ಚಿತ್ರ)
ಬೆಂಗಳೂರು: ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ ಅವರ ಹೆಸರು ಹಾಗೂ ಹುದ್ದೆ ಬಳಸಿಕೊಂಡು ಲಕ್ಷಾಂತರ ರೂಪಾಯಿ ವಂಚಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮೈಸೂರು ಜಿಲ್ಲೆಯ ನಂಜನಗೂಡಿನ ಕೆ.ಸಿ.ಜಗದೀಶ್ ಎಂಬುವವರನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಇತರೆ ಆರೋಪಿಗಳಿಗೆ ಶೋಧ ಕಾರ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೆಎಸ್‌ಎಸ್ ವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ವೆಂಕಟೇಶ್ ಮುತ್ತಣ್ಣ ಅವರಿಗೆ ಕೆಪಿಎಸ್‌ಸಿ ಸದಸ್ಯ ಸ್ಥಾನ ಕೊಡಿಸುವುದಾಗಿ ಎಂ.ರಾಮಯ್ಯ ಅವರ ಹೆಸರು ಬಳಸಿಕೊಂಡು 2023ರ ಸೆಪ್ಟೆಂಬರ್‌ನಿಂದ 2025ರ ಏಪ್ರಿಲ್‌ವರೆಗೆ ಹಣ ಪಡೆದುಕೊಂಡು ವಂಚಿಸಿದ್ದಾರೆ ಎಂದು ದೂರು ನೀಡಲಾಗಿತ್ತು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಬಾತ್ಮೀದಾರರ ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.