ADVERTISEMENT

ಮಾಲಿನ್ಯ ನಿಯಂತ್ರಣ ಮಂಡಳಿ: ಅರ್ಜಿ ವಿಲೇವಾರಿ

​ಪ್ರಜಾವಾಣಿ ವಾರ್ತೆ
Published 18 ಜುಲೈ 2019, 19:30 IST
Last Updated 18 ಜುಲೈ 2019, 19:30 IST

ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸಿ. ಜಯರಾಮ್ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಿಲೇವಾರಿ ಮಾಡಿದೆ.

ಈ ಕುರಿತಂತೆ ವಕೀಲ ಎಸ್. ಉಮಾಪತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌.ಎಸ್. ಓಕಾ ಹಾಗೂ ನ್ಯಾಯಮೂರ್ತಿ ಎಚ್.ಟಿ. ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ‘ಈಗಾಗಲೇ ಸಿ. ಜಯರಾಮ್ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಅರ್ಜಿ ವಿಚಾರಣೆಯಲ್ಲಿ ಹುರುಳಿಲ್ಲ ಎಂಬ ಅಭಿಪ್ರಾಯದೊಂದಿಗೆ ವಿಲೇವಾರಿ ಮಾಡಿತು.

ADVERTISEMENT

ರಾಜ್ಯ ಸರ್ಕಾರ ಜಯರಾಮ್ ಅವರನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ 2019ರ ಮಾರ್ಚ್‌ 5ರಂದು ನೇಮಕ ಮಾಡಿ ಆದೇಶ ಹೊರಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.