ಬೆಂಗಳೂರು: ನಗರದಲ್ಲಿ ಪರಿಸರ ಸ್ನೇಹಿ ಗೌರಿ-ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಹಬ್ಬ ಆಚರಿಸುವಂತೆ ನಾಗರಿಕರಲ್ಲಿ ಅರಿವು ಮೂಡಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪಿಒಪಿ ಗಣೇಶ ಮೂರ್ತಿಗಳನ್ನು ತಯಾರಿಸುವವರ ಮೇಲೆ ಕೇಸ್ ದಾಖಲಿಸಬೇಕು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.