ADVERTISEMENT

ಬೆಂಗಳೂರು: ನಾಳೆಯಿಂದಲೇ ಮನೆಯಿಂದ ಅಂಚೆ ಮತದಾನ ಮಾಡಬಹುದು

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2024, 15:00 IST
Last Updated 12 ಏಪ್ರಿಲ್ 2024, 15:00 IST
logo
logo   

ಬೆಂಗಳೂರು: ಬೆಂಗಳೂರು ಉತ್ತರ, ಕೇಂದ್ರ ಹಾಗೂ ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ 85 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರು ಹಾಗೂ ಅಂಗವಿಕಲರು ಶನಿವಾರದಿಂದ ಮನೆಯಿಂದಲೇ ಅಂಚೆ ಮತದಾನ ಮಾಡಬಹುದು.

ಮೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85 ವರ್ಷಕ್ಕಿಂತ ಹೆಚ್ಚಿನವರು 95,128 ರಷ್ಟಿದ್ದಾರೆ. ಇವರಲ್ಲಿ 6,206 ಮಂದಿ ಹಾಗೂ 22,222 ಅಂಗವಿಕಲರಲ್ಲಿ 201 ಮತದಾರರು ಮಾತ್ರ ಅಂಚೆ ಮತದಾನಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ.

ಏಪ್ರಿಲ್ 13ರಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಬ್ಬರು ಮತಗಟ್ಟೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವಿಡಿಯೊಗ್ರಾಫರ್ ಒಳಗೊಂಡಿರುವ ಮತಗಟ್ಟೆ ತಂಡವು ಮತದಾರರ ಮನೆಗೆ ತೆರಳಿ, ಮತದಾನದ ಗುರುತಿನ ಚೀಟಿ ಪರಿಶೀಲಿಸುತ್ತದೆ. ಬಳಿಕ ಗೌಪ್ಯ ಮತದಾನಕ್ಕಾಗಿ ಅಂಚೆ ಮತಪತ್ರದಲ್ಲಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗುತ್ತದೆ. ಈ ಎಲ್ಲಾ ಪ್ರಕ್ರಿಯೆಯನ್ನು ವಿಡಿಯೊಗ್ರಫಿ ಮಾಡಲಾಗುತ್ತದೆ.

ADVERTISEMENT

ಮತಗಟ್ಟೆ ಸಿಬ್ಬಂದಿಯು ಮತಪತ್ರ ಹಾಗೂ ಮತಪೆಟ್ಟಿಗೆಗಳೊಂದಿಗೆ ಮತದಾರರಿಗೆ ಮುಂಚಿತವಾಗಿ ಮಾಹಿತಿ ನೀಡಿ ಮನೆಗೆ ಭೇಟಿ ನೀಡಲಿದ್ದಾರೆ. ಮೊದಲ ಬಾರಿ ಭೇಟಿ ನೀಡಿದಾಗ ಮತದಾರರು ಮನೆಯಲ್ಲಿರದಿದ್ದರೆ, ಎರಡನೇ ಬಾರಿ ಹೋಗುತ್ತಾರೆ. ಆ ಬಳಿಕ ಮತದಾನಕ್ಕೆ ಅವಕಾಶವಿರುವುದಿಲ್ಲ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ಮನೆಯಿಂದ ಮತದಾನಕ್ಕೆ 12ಡಿ ನಮೂನೆಯಲ್ಲಿ ನೋಂದಣಿ ಮಾಡಿಸಿಕೊಂಡವರಿಗೆ ಮತಗಟ್ಟೆಯಲ್ಲಿ ವಿದ್ಯುನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸುವ ಅವಕಾಶ ಇಲ್ಲ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.