ADVERTISEMENT

‘ಪೌರಕಾರ್ಮಿಕರನ್ನು ಕಾಯಂಗೊಳಿಸಿ’

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2019, 19:50 IST
Last Updated 13 ಫೆಬ್ರುವರಿ 2019, 19:50 IST

ಬೆಂಗಳೂರು:ಪೌರ ಕಾರ್ಮಿಕರನ್ನು ಕಾಯಂಗೊಳಿಸಿ,ಗುತ್ತಿಗೆ ಪದ್ಧತಿಯಿಂದ ಮುಕ್ತಗೊಳಿಸಬೇಕು ಎಂದು ಸಿಟಿ ಕಾರ್ಪೊರೇಷನ್‌ ವರ್ಕರ್ಸ್‌ ಫೆಡರೇಷನ್‌ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಅಧ್ಯಕ್ಷ ಕೆ.ಸಿ.ವಿಜಯಕುಮಾರ್‌,‘ಪಾಲಿಕೆಯ ವ್ಯಾಪ್ತಿಯಲ್ಲಿ 8,500 ಪೌರ
ಕಾರ್ಮಿಕರಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಇಲ್ಲ. ರಜೆ ಗಳನ್ನೂ ಕೊಡುತ್ತಿಲ್ಲ’ ಎಂದು ದೂರಿದರು.

‘ಕಾರ್ಮಿಕರಿಗೆ ನೇರ ವೇತನ ಪಾವತಿ ವ್ಯವಸ್ಥೆ ಜಾರಿಗೆ ತರಲಾಯಿತು. ಅದರಲ್ಲಿಯೂ ವೇತನ ಸರಿಯಾಗಿ ಸಿಗುತ್ತಿಲ್ಲ. ಬಯೋಮೆಟ್ರಿಕ್‌ ವ್ಯವಸ್ಥೆಯಿಂದ ವೇತನ ಕಡಿತವಾಗುತ್ತಿದೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆಯಡಿ ಕಾರ್ಮಿಕರಿಗೆ ಜೀವ ವಿಮೆ ಮಾಡಿಸಬೇಕು. ಪ್ರತಿ ತಿಂಗಳು 7ರೊಳಗೆ ವೇತನ ನೀಡಬೇಕು. ಭವಿಷ್ಯ ನಿಧಿ ಸಂರಕ್ಷಣೆಗೆ ಟ್ರಸ್ಟ್‌ ಆರಂಭಿಸಬೇಕು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.