ADVERTISEMENT

ಬೆಂಗಳೂರಿನಲ್ಲಿ ವಿದ್ಯುತ್‌ ವ್ಯತ್ಯಯ ಇಂದು

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2020, 18:07 IST
Last Updated 3 ಸೆಪ್ಟೆಂಬರ್ 2020, 18:07 IST

ಬೆಂಗಳೂರು:ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದ ವಿವಿಧ ಪ್ರದೇಶಗಳಲ್ಲಿ ಸೆ. 4ರಂದು ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.

ಎನ್.ಎಸ್. ಬಡಾವಣೆ, ಸ್ವಾತಂತ್ರ್ಯ ಹೋರಾಟಗಾರರ ಬಡಾವಣೆ, ಕೆಂಪೇಗೌಡ ಬಡಾವಣೆ, ಕುರುಬರಹಳ್ಳಿ ಮುಖ್ಯರಸ್ತೆ, ಲಗ್ಗೆರೆ ಸೇತುವೆ ವರ್ತುಲ ರಸ್ತೆ, ಮುನೇಶ್ವರ ಬಡಾವಣೆ ಮತ್ತು ಸುತ್ತ–ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ದೂರುಗಳಿಗೆ 1912 ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು. ವಿದ್ಯುತ್‌ ವ್ಯತ್ಯಯದ ಕುರಿತು ಮೊದಲೇ ತಿಳಿದುಕೊಳ್ಳಲು www.bescom.org ವೆಬ್‌ಸೈಟ್‌ ನೋಡಬಹುದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.