
ಬೆಂಗಳೂರು: ಹಿರಿಯ ಚಿತ್ರ ಕಲಾವಿದೆ ಪ್ರಭಾ ಮಲ್ಲೇಶ್ ಅವರ ಮೈಸೂರು ಸಂಪ್ರದಾಯಿಕ ಶೈಲಿಯ ಕಲಾಕೃತಿಗಳಿರುವ 'ರೂಟೆಡ್ ಇನ್ ಗೋಲ್ಡ್' ಪುಸ್ತಕವು ಜ.25ರಂದು ಬಿಡುಗಡೆಯಾಗಲಿದೆ.
ಬೆಂಗಳೂರಿನ ಎಂ.ಜಿ ರಸ್ತೆಯಲ್ಲಿರುವ ತಾಜ್ ಹೋಟೆಲ್‌ನಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಆಯೋಜನೆಗೊಂಡಿದೆ.
ಮೈಸೂರು ಸಾಂಪ್ರದಾಯಿಕ ಚಿತ್ರಕಲೆಯಲ್ಲಿ ತಮ್ಮದೇ ಆದ ವಿಭಿನ್ನ ಬಗೆಯ ವಿನ್ಯಾಸದ ವರ್ಣ ರಂಜಿತ ಚಿತ್ರಗಳನ್ನು ಬಿಡಿಸುವ ಮೂಲಕ ಪ್ರಭಾ ಮಲ್ಲೇಶ್ ಅವರು ಗುರುತಿಸಿಕೊಂಡಿದ್ದಾರೆ. ಇವರು ಹಲವಾರು ಚಿತ್ರಕಲಾ ಪ್ರದರ್ಶನವನ್ನುಕೂಡ ಮಾಡಿದ್ದಾರೆ.
ಪ್ರಭಾ ಮಲ್ಲೇಶ್ ರಚಿಸಿರುವ ಮೈಸೂರು ಸಾಂಪ್ರದಾಯಿಕ ಚಿತ್ರಕಲೆ
ಪ್ರಭಾ ಮಲ್ಲೇಶ್ ಅವರು ಸುಮಾರು 600ಕ್ಕಿಂತಲೂ ಹೆಚ್ಚು ಮೈಸೂರು ಸಂಪ್ರದಾಯಿಕ ಶೈಲಿಯ ಕಲಾಕೃತಿಗಳನ್ನು ರಚಿಸಿದ್ದಾರೆ. ಅದರಲ್ಲಿ 130 ಚಿತ್ರಗಳನ್ನು ಆಯ್ಕೆ ಮಾಡಿ 150 ಪುಟಗಳಿರುವ ಪುಸ್ತಕವನ್ನು ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್. ಶಂಕರ್, ಚಿತ್ರ ಕಲಾವಿದ ಚಂದ್ರನಾಥ್ ಆಚಾರ್ಯ, ಚಿರಂಜೀವಿ ಸಿಂಗ್, ಲಕ್ಷ್ಮಿ ಗೋಪಾಲಸ್ವಾಮಿ ಅವರು ಪಾಲ್ಗೊಳ್ಳಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.