ADVERTISEMENT

ಪ್ರಹ್ಲಾದ್‌ ಬಿಬಿಎಂಪಿ ಪ್ರಧಾನ ಎಂಜಿನಿಯರ್‌

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2022, 20:02 IST
Last Updated 8 ಸೆಪ್ಟೆಂಬರ್ 2022, 20:02 IST
ಬಿ.ಎಸ್‌. ಪ್ರಹ್ಲಾದ್‌
ಬಿ.ಎಸ್‌. ಪ್ರಹ್ಲಾದ್‌   

ಬೆಂಗಳೂರು: ಬಿಬಿಎಂಪಿ ಪ್ರಧಾನ ಎಂಜಿನಿಯರ್‌ ಆಗಿ ಬಿ.ಎಸ್‌. ಪ್ರಹ್ಲಾದ್‌ ಗುರುವಾರ ಅಧಿಕಾರ ವಹಿಸಿಕೊಂಡರು. ರಸ್ತೆ ಮೂಲಸೌಕರ್ಯ ವಿಭಾಗದ ಮುಖ್ಯ ಎಂಜಿನಿಯರ್‌ ಆಗಿದ್ದ ಪ್ರಹ್ಲಾದ್‌ ಅವರು 1993ರಲ್ಲಿ ಪಾಲಿಕೆಗೆ ಸೇರಿಕೊಂಡಿದ್ದರು. ಪ್ರಧಾನ ಎಂಜಿನಿಯರ್‌ ಹುದ್ದೆಯ ಜೊತೆಗೆ ರಸ್ತೆ ಮೂಲಸೌಕರ್ಯ ವಿಭಾಗದ ನೇರ ಮೇಲ್ವಿಚಾರಣೆ ಜವಾಬ್ದಾರಿಯನ್ನೂ ಪ್ರಹ್ಲಾದ್‌ ಅವರಿಗೆ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.