
ಪ್ರಜಾವಾಣಿ ವಾರ್ತೆ
ಭಾವು ಪತ್ತಾರ
ಬೆಂಗಳೂರು: ಪ್ರಜಾವಾಣಿ ದಿನ ಪತ್ರಿಕೆ ಕಲಾವಿದ ಭಾವು ಪತ್ತಾರ ಅನಾರೋಗ್ಯದಿಂದ ನಿಧನರಾದರು.
ಅವರಿಗೆ 57 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ ಬೆಳಗ್ಗೆ 7.30ಕ್ಕೆ ನಿಧನರಾದರು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.
ನಾಳೆ (ನ.15, ಶನಿವಾರ) ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.