ADVERTISEMENT

ನಾಳೆ ‘ಪ್ರಜಾವಾಣಿ’ ಜನಸ್ಪಂದನ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2020, 20:24 IST
Last Updated 27 ಫೆಬ್ರುವರಿ 2020, 20:24 IST
ಜನಸ್ಪಂದನ ಲೋಗೊ
ಜನಸ್ಪಂದನ ಲೋಗೊ   

ಬೆಂಗಳೂರು: ಸುಂಕೇನಹಳ್ಳಿ ವಾರ್ಡ್‌ನಲ್ಲಿರುವ ಕುಂದು ಕೊರತೆಗಳಿಗೆ ಪರಿಹಾರ ಕಂಡುಕೊಳ್ಳಲು ‘ಪ್ರಜಾವಾಣಿ’ ಪತ್ರಿಕೆ‌ಯ ಆಶ್ರಯ ದಲ್ಲಿ ‘ಜನಸ್ಪಂದನ–ಸಿಟಿಜನ್ಸ್‌ ಫಾರ್‌ ಚೇಂಜ್‌’ ಕಾರ್ಯಕ್ರಮ ಇದೇ
29ರಂದು ಬೆಳಿಗ್ಗೆ 10ಕ್ಕೆ ಬುಲ್‌ ಟೆಂಪಲ್‌ ರಸ್ತೆಯಲ್ಲಿರುವ ಎಸ್.ಬಿ.ಎನ್‌.ಹಾಲ್‌ನಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯ ರಮೇಶ್‌ ಡಿ.ಎನ್‌, ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಸಾರ್ವಜನಿಕರು ಕುಡಿಯುವ ನೀರು ಪೂರೈಕೆ ವ್ಯತ್ಯಯ, ಕಸ ವಿಲೇವಾರಿ ಸಮಸ್ಯೆ, ರಸ್ತೆ ಸುರಕ್ಷತೆ, ಉದ್ಯಾನ
ಗಳಿಗೆ ಸಂಬಂಧಿಸಿದ ಸಮಸ್ಯೆ ಸೇರಿದಂತೆ ಇನ್ನಿತರೆ ಕುಂದುಕೊರತೆಗಳ ಬಗ್ಗೆ ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು. ಈ ಮೂಲಕವಾರ್ಡ್‌ನ ಅಭಿವೃದ್ಧಿಯಲ್ಲಿ ನೀವು ಕೂಡ ಕೈಜೋಡಿಸಬಹುದು.

ADVERTISEMENT

ವಾರ್ಡ್‌ನ ಕುಂದುಕೊರತೆಗಳ ಬಗ್ಗೆ ಗಮನ ಸೆಳೆಯಲು ಇಚ್ಛಿಸುವವರು 29ರಂದು ಬೆಳಿಗ್ಗೆ
9ರಿಂದ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಸ್ಥಳದಲ್ಲೇ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹದು. ಬೆಳಿಗ್ಗೆ 10ರಿಂದ ಪ್ರಶ್ನೆಕೇಳಲು ಅವಕಾಶ ಕಲ್ಪಿಸ
ಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ: 9448528998

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.