ADVERTISEMENT

ಮನೋರಾಯನಪಾಳ್ಯ ವಾರ್ಡ್‌ನಲ್ಲಿ ‘ಪ್ರಜಾವಾಣಿ’ ಜನಸ್ಪಂದನ ನಾಳೆ

​ಪ್ರಜಾವಾಣಿ ವಾರ್ತೆ
Published 30 ಜನವರಿ 2020, 20:10 IST
Last Updated 30 ಜನವರಿ 2020, 20:10 IST
ಪ್ರಜಾವಾಣಿ ಜನಸ್ಪಂದನ
ಪ್ರಜಾವಾಣಿ ಜನಸ್ಪಂದನ    

ಬೆಂಗಳೂರು: ‘ಪ್ರಜಾವಾಣಿ– ಡೆಕ್ಕನ್‌ ಹೆರಾಲ್ಡ್‌’ ವತಿಯಿಂದ ‘ಜನಸ್ಪಂದನ’ (ಸಿಟಿಜನ್ಸ್‌ ಫಾರ್‌ ಚೇಂಜ್‌) ಕಾರ್ಯಕ್ರಮ ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನೋರಾಯನಪಾಳ್ಯ ವಾರ್ಡ್‌ನಲ್ಲಿ ಫೆ.1ರಂದು ನಡೆಯಲಿದೆ.

ಬಿಬಿಎಂಪಿ ವಿರೋಧ ಪಕ್ಷದ ನಾಯಕರೂ ಆಗಿರುವ ವಾರ್ಡ್‌ ಸದಸ್ಯ ಅಬ್ದುಲ್‌ ವಾಜಿದ್‌ ನಿವಾಸಿಗಳ ಸಮಸ್ಯೆ ಆಲಿಸಲಿದ್ದಾರೆ. ಬಿಬಿಎಂಪಿ, ಜಲಮಂಡಳಿ,ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ), ಬೆಸ್ಕಾಂ, ಪೊಲೀಸ್‌ ಇಲಾಖೆಯ ಅಧಿಕಾರಿಗಳು ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ವಾರ್ಡ್‌ನ ನಿವಾಸಿಗಳು ಸ್ಥಳೀಯ ಸಮಸ್ಯೆಗಳನ್ನು ನೇರವಾಗಿ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬಹುದು.

ADVERTISEMENT

ಆಸಕ್ತರು ಬೆಳಿಗ್ಗೆ 9ರಿಂದ ಹೆಸರು ನೋಂದಾಯಿಸಿಕೊಳ್ಳಬೇಕು.ಮೊದಲು ನೋಂದಣಿ ಮಾಡಿಸಿದವರಿಗೆ ಆದ್ಯತೆ. ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಕಾರ್ಯಕ್ರಮ ನಡೆಯಲಿದೆ.

ಸ್ಥಳ: ಟ್ರಿಲಿಯಂ ಪಬ್ಲಿಕ್‌ ಸ್ಕೂಲ್‌, 31/1, 7ನೇ ಕ್ರಾಸ್‌, ದಾಸಪ್ಪ ಗಾರ್ಡನ್, ಆರ್.ಟಿ. ನಗರ, ಬೆಂಗಳೂರು–560032.

ಸಂಪರ್ಕ: 97399 97938.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.