ADVERTISEMENT

ಡಿಸೆಂಬರ್ 15ರಂದು ಪ್ರಜಾವಾಣಿ ವಲಯ ಮಟ್ಟದ ಕ್ವಿಜ್‌

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2025, 14:32 IST
Last Updated 7 ಡಿಸೆಂಬರ್ 2025, 14:32 IST
<div class="paragraphs"><p>ಐಎಲ್‌ಯು</p></div>

ಐಎಲ್‌ಯು

   

ಬೆಂಗಳೂರು: ಬೆಂಗಳೂರು ವಲಯ ಮಟ್ಟದ ‘ಪ್ರಜಾವಾಣಿ–ರಸಪ್ರಶ್ನೆ ಚಾಂಪಿಯನ್‌ಶಿಪ್‌’ ಡಿಸೆಂಬರ್ 15ರಂದು ಜಯನಗರದಲ್ಲಿರುವ ರಾಷ್ಟ್ರೀಯ ವಿದ್ಯಾಲಯದ ಆರ್‌.ವಿ. ಆಡಿಟೋರಿಯಂನಲ್ಲಿ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳು ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿ, ಹೆಸರು ನೋಂದಾಯಿಸಿಕೊಳ್ಳಬಹುದು.

ಬೆಂಗಳೂರು ನಗರ, ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳ 7ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಬಹುದು. 

ADVERTISEMENT

ಇದು ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದ ರಸಪ್ರಶ್ನೆ ಸ್ಪರ್ಧೆಯಾಗಿದ್ದು, ವಿದ್ಯಾರ್ಥಿಗಳು ಶಾಲೆಗಳ ಮೂಲಕ ತಂಡವಾಗಿ ನೋಂದಾಯಿಸಿಕೊಳ್ಳಬೇಕು. ಪ್ರತಿ ತಂಡದಲ್ಲಿ ಕಡ್ಡಾಯವಾಗಿ ಇಬ್ಬರು ವಿದ್ಯಾರ್ಥಿಗಳು ಇರಬೇಕು. ಬೇರೆ ಬೇರೆ ತರಗತಿಯ ವಿದ್ಯಾರ್ಥಿಗಳೂ ತಂಡವಾಗಿ ಭಾಗವಹಿಸಬಹುದು. ಒಂದು ಶಾಲೆಯಿಂದ ಎಷ್ಟು ತಂಡಗಳು ಬೇಕಾದರೂ ಇರಬಹುದು.

ಕ್ವಿಜ್‌ಗೆ ಎಲ್ಲರಿಗೂ ಉಚಿತ ಪ್ರವೇಶವಿದೆ. ಸ್ಪರ್ಧೆ ನಡೆಯುವ ಸ್ಥಳದಲ್ಲೂ ಹೆಸರನ್ನು ನೋಂದಾಯಿಸಲು ಅವಕಾಶವಿದೆ. ಈ ವಲಯದಲ್ಲಿ ವಿಜೇತರಾದವರು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅರ್ಹರಾಗುತ್ತಾರೆ. ತಂಡಗಳಿಗೆ ಪ್ರಾಥಮಿಕ ಹಂತದ ಪರೀಕ್ಷೆ ನಡೆಯುತ್ತದೆ.

ಹೆಚ್ಚಿನ ಮಾಹಿತಿಗೆ ಬೆಳಿಗ್ಗೆ 10ರಿಂದ ಸಂಜೆ 5ರೊಳಗೆ ಸಂಪರ್ಕಿಸಬೇಕಾದ ದೂರವಾಣಿ: 7338018541.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.