ADVERTISEMENT

ಪ್ರವೀಣ್ ಸೂದ್ ಸಿಬಿಐ ನಿರ್ದೇಶಕ

ಅಲೋಕ್‌ ಮೋಹನ್ ಹೊಸ ಡಿಜಿ–ಐಜಿಪಿ?

​ಪ್ರಜಾವಾಣಿ ವಾರ್ತೆ
Published 15 ಮೇ 2023, 3:18 IST
Last Updated 15 ಮೇ 2023, 3:18 IST
ಪ್ರವೀಣ್ ಸೂದ್
ಪ್ರವೀಣ್ ಸೂದ್   

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ–ಐಜಿಪಿ) ಪ್ರವೀಣ್ ಸೂದ್ ಅವರು ಕೇಂದ್ರೀಯ ತನಿಖಾ ದಳದ (ಸಿಬಿಐ) ನೂತನ ನಿರ್ದೇಶಕರಾಗಿ ನೇಮಕಗೊಂಡಿದ್ದು, ಮೇ ಕೊನೆಯ ವಾರದಲ್ಲಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ.

ಅವರ ನಿರ್ಗಮನದಿಂದ ತೆರವಾಗ ಲಿರುವ ಡಿಜಿ–ಐಜಿಪಿ ಹುದ್ದೆಗೆ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಮೋಹನ್ ನೇಮಕಗೊಳ್ಳುವ ಸಾಧ್ಯತೆ ಹೆಚ್ಚಿದೆ. 2020ರ ಜ. 31ರಂದು 41ನೇ ಡಿಜಿ–ಐಜಿಪಿ ಆಗಿ ಪ್ರವೀಣ್ ಸೂದ್ ಅಧಿಕಾರ ಸ್ವೀಕರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT