ADVERTISEMENT

ಶಾಂತಿ ಸುವ್ಯವಸ್ಥೆಗೆ ಭಂಗ ತಂದರೆ ಕ್ರಮ: ಪ್ರವೀಣ್‌ ಸೂದ್‌

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2022, 21:30 IST
Last Updated 6 ಏಪ್ರಿಲ್ 2022, 21:30 IST

ಬೆಂಗಳೂರು: ‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಅದಕ್ಕೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ತಿಳಿಸಿದ್ದಾರೆ.

ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿ ನಡೆದ ಉನ್ನತ ಅಧಿಕಾರಿಗಳ ಸಭೆಯ ಬಳಿಕ ಅವರು ಬುಧವಾರ ಮಾತನಾಡಿದರು.

‘ಪೊಲೀಸರ ಅಹವಾಲು ಆಲಿಸುವ ಸಲುವಾಗಿ ಪ್ರತಿ ಜಿಲ್ಲೆಗೂ ಭೇಟಿ ನೀಡುತ್ತೇನೆ. ಬೆಂಗಳೂರು ಕಮಿಷನರೇಟ್‌ ವ್ಯಾಪ್ತಿಯ ಪೊಲೀಸರ ಸಮಸ್ಯೆ ಹಾಗೂ ಅಗತ್ಯತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಕಾನೂನು ಸುವ್ಯವಸ್ಥೆಗೆ ಭಂಗ ತರುವವರ ವಿರುದ್ಧ ಹಿಂದೆಯೂ ಕ್ರಮ ಕೈಗೊಂಡಿದ್ದೇವೆ. ಮುಂದೆಯೂ ಕ್ರಮ ಕೈಗೊಳ್ಳುತ್ತೇವೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.