ADVERTISEMENT

ಕುರುಬ ಸಮುದಾಯ: ಪಾದಯಾತ್ರೆ ಸಮಾರೋಪಕ್ಕೆ ಸಿದ್ಧತೆ

ವೇದಿಕೆ ನಿರ್ಮಾಣಕ್ಕೆ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2021, 2:09 IST
Last Updated 29 ಜನವರಿ 2021, 2:09 IST
ತುಮಕೂರು ರಸ್ತೆಯ ಬಿಐಇಸಿ ಬಳಿ ನಡೆಯುವ ಕುರುಬರ ಎಸ್‌.ಟಿ. ಹೋರಾಟ ಸಮಿತಿ ಪಾದಯಾತ್ರೆಯ ಸಮಾರೋಪ ಸಮಾರಂಭದ ವೇದಿಕೆ ನಿರ್ಮಾಣಕ್ಕೆ ಸಚಿವ ಕೆ.ಎಸ್‌. ಈಶ್ವರಪ್ಪ ನೇತೃತ್ವದಲ್ಲಿ ಗುರುವಾರ ಭೂಮಿಪೂಜೆ ನೆರವೇರಿಸಲಾಯಿತು
ತುಮಕೂರು ರಸ್ತೆಯ ಬಿಐಇಸಿ ಬಳಿ ನಡೆಯುವ ಕುರುಬರ ಎಸ್‌.ಟಿ. ಹೋರಾಟ ಸಮಿತಿ ಪಾದಯಾತ್ರೆಯ ಸಮಾರೋಪ ಸಮಾರಂಭದ ವೇದಿಕೆ ನಿರ್ಮಾಣಕ್ಕೆ ಸಚಿವ ಕೆ.ಎಸ್‌. ಈಶ್ವರಪ್ಪ ನೇತೃತ್ವದಲ್ಲಿ ಗುರುವಾರ ಭೂಮಿಪೂಜೆ ನೆರವೇರಿಸಲಾಯಿತು   

ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಗಳ (ಎಸ್‌.ಟಿ) ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಪಾದಯಾತ್ರೆಯ ಸಮಾರೋಪ ಸಮಾರಂಭ ತುಮಕೂರು ರಸ್ತೆಯ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರ(ಬಿಐಇಸಿ)ದ ಸಮೀಪದಲ್ಲಿ ನಡೆಯಲಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ
ಅವರು ವೇದಿಕೆ ನಿರ್ಮಾಣಕ್ಕೆ ಗುರುವಾರ ಭೂಮಿಪೂಜೆ ನೆರವೇರಿಸಿದರು.

ಕಾಗಿನೆಲೆ ಕನಕ ಗುರುಪೀಠದಿಂದ ಆರಂಭವಾಗಿರುವ ಪಾದಯಾತ್ರೆ ಫೆಬ್ರುವರಿ 7ರಂದು ಬೆಂಗಳೂರಿನಲ್ಲಿ ಸಮಾರೋಪಗೊಳ್ಳಲಿದೆ. ಇದ
ಕ್ಕಾಗಿ ಮಾದಾವರದ ಬಿಐಇಸಿ ಸಮೀಪದಲ್ಲಿ ಬೃಹತ್‌ ವೇದಿಕೆ ನಿರ್ಮಿಸಲಾಗುತ್ತಿದೆ. ಸಮಾರೋಪ ಸಮಾರಂಭದಲ್ಲಿ ಸಾವಿರಾರು ಜನರು ಭಾಗವಹಿಸುವ ಸಾಧ್ಯತೆ ಇದ್ದು, ಗುರುವಾರದಿಂದಲೇ ಸಿದ್ಧತೆಗಳನ್ನು ಆರಂಭಿಸಲಾಗಿದೆ.

ರಾಜ್ಯ ಕುರುಬರ ಎಸ್‌.ಟಿ. ಹೋರಾಟ ಸಮಿತಿ ಅಧ್ಯಕ್ಷ ಕೆ. ವಿರೂಪಾಕ್ಷಪ್ಪ, ಪ್ರಧಾನ ಕಾರ್ಯದರ್ಶಿ ಆನೇಕಲ್‌ ದೊಡ್ಡಯ್ಯ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಬಿ.ಎಸ್‌. ಸೋಮಶೇಖರ್‌, ಕುರುಬರ ಸಂಘದ ಮಾಜಿ ಅಧ್ಯಕ್ಷ ಲಿಂಗಪ್ಪ, ಮುಖಂಡರಾದ ಯಲಹಂಕ ಮುನಿರಾಜು, ಚಿತ್ರದುರ್ಗ ಮಂಜುನಾಥ್‌ ಭೂಮಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.