ADVERTISEMENT

ಸ್ವಾತಂತ್ರ‍್ಯ ದಿನಾಚರಣೆಗೆ ಅಗತ್ಯ ಸಿದ್ಧತೆ ಆರಂಭಿಸಿ: ತುಷಾರ್‌ ಗಿರಿನಾಥ್‌

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2024, 19:49 IST
Last Updated 7 ಆಗಸ್ಟ್ 2024, 19:49 IST
ತುಷಾರ್‌ ಗಿರಿನಾಥ್‌
ತುಷಾರ್‌ ಗಿರಿನಾಥ್‌   

ಬೆಂಗಳೂರು: ರಾಜ್ಯಮಟ್ಟದ ಸ್ವಾತಂತ್ರ‍್ಯ ದಿನಾಚರಣೆಗೆ ಅಗತ್ಯ ಸಿದ್ಧತೆಗಳನ್ನು ಆರಂಭಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅಧಿಕಾರಿಗಳಿಗೆ ಸೂಚಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪೂರ್ವಾಭ್ಯಾಸ, ಕಲಾವಿದರು, ವಿದ್ಯಾರ್ಥಿಗಳಿಗೆ ತಿಂಡಿ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಫೀಲ್ಡ್‌ ಮಾರ್ಷಲ್‌ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆಸನಗಳ ವ್ಯವಸ್ಥೆ, ದ್ವಾರಗಳಲ್ಲಿ ಪ್ರವೇಶ, ವಾಹನ ನಿಲುಗಡೆ, ಮಾರ್ಗ ಬದಲಾವಣೆ, ಭದ್ರತಾ ಸಿಬ್ಬಂದಿ ನಿಯೋಜನೆ ಎಂದು ಸೋಮವಾರ ನಡೆದ ಸಭೆಯಲ್ಲಿ ತಿಳಿಸಿದರು.

‘ಅಂಗಾಂಗ ದಾನದ ವಿಶೇಷ ಕಾರ್ಯ’ಕ್ಕಾಗಿ 80 ಮಂದಿಯ ಕುಟುಂಬಕ್ಕೆ ಮುಖ್ಯಮಂತ್ರಿಯವರು  ಪ್ರಶಂಸಾಪತ್ರ ನೀಡಲಿದ್ದಾರೆ ಎಂದು ಅವರು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.