ADVERTISEMENT

ಬೆಂಗಳೂರು: ಪುರಭವನದ ಎದುರು ಬೃಹತ್ ಪ್ರತಿಭಟನೆಗೆ ತಯಾರಿ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 5:58 IST
Last Updated 28 ಸೆಪ್ಟೆಂಬರ್ 2020, 5:58 IST
ಪುರಭವನದ ಎದುರು ಜಮಾಯಿಸಿರುವ ವಿವಿಧ ಸಂಘಟನೆಗಳ ಪ್ರತಿಭಟನಾಕಾರರು
ಪುರಭವನದ ಎದುರು ಜಮಾಯಿಸಿರುವ ವಿವಿಧ ಸಂಘಟನೆಗಳ ಪ್ರತಿಭಟನಾಕಾರರು   

ಬೆಂಗಳೂರು: ರಾಜ್ಯವ್ಯಾಪಿ ಬಂದ್ ಹಿನ್ನೆಲೆಯಲ್ಲಿ ನಗರದಲ್ಲೂ ಪ್ರತಿಭಟನೆ ಕಾವು ಹೆಚ್ಚುತ್ತಿದೆ. ನಗರದ ವಿವಿಧ ಭಾಗಗಳಿಂದ ರೈತರು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಪುರಭವನದ ಎದುರು ಬರುತ್ತಿದ್ದು, ಬೃಹತ್ ಪ್ರತಿಭಟನೆಗೆ ತಯಾರಿ ನಡೆದಿದೆ.

ಸುಮನಹಳ್ಳಿ, ಮೈಸೂರು ರಸ್ತೆ ಹಾಗೂ ಇತರೆ ಕಡೆಯಿಂದಲೂ ಪ್ರತಿಭಟನಾಕಾರರು ಪುರಭವನದತ್ತ ಬರುತ್ತಿದ್ದಾರೆ. ಸಮಯ ಕಳೆದಂತೆ ಪುರಭವನ ಎದುರು ಹೆಚ್ಚು ಜನರು ಕಂಡುಬರುತ್ತಿದ್ದು, ನಿಧಾನವಾಗಿ ವಾಹನಗಳ ದಟ್ಟಣೆಯೂ ಉಂಟಾಗುತ್ತಿದೆ.

ಸುಮನಹಳ್ಳಿ ವೃತ್ತದಿಂದ ಕಬ್ಬು ಬೆಳಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮೆರವಣಿಗೆ ಪುರಭವನದತ್ತ ಬರುತ್ತಿದೆ. ಕೆಲ ಗಂಟೆಗಳ ಬಳಿಕ ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಬೃಹತ್ ರ್ಯಾಲಿ ನಡೆಯಲಿದೆ.

ADVERTISEMENT

ಮೆಜೆಸ್ಟಿಕ್‌ನ ಬಸ್ ಹಾಗೂ ರೈಲು ನಿಲ್ದಾಣದಲ್ಲೂ ಕರವೇ ಕಾರ್ಯಕರ್ತರು, ಪ್ರತಿಭಟನೆ ಆರಂಭಿಸಿದ್ದಾರೆ. ಬಸ್‌ಗಳ ಸಂಚಾರಕ್ಕೆ ಅಡ್ಡಿಪಡಿಸಿ ಘೋಷಣೆ ಕೂಗಿದರು. ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ನಾಯಂಡನಹಳ್ಳಿ ಬಳಿಯೂ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದರು. ಕೆಲ ಗಂಟೆಗಳ ಬಳಿಕ ಬಿಡುಗಡೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.