
ರಾಜರಾಜೇಶ್ವರಿ ನಗರ: ‘ಭಾರತೀಯ ಸಂಸ್ಕಾರ, ಸಂಸ್ಕೃತಿ, ಪರಂಪರೆ, ಇತಿಹಾಸ ವಿನಾಶದ ಅಂಚಿನಲ್ಲಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಯುವ ಜನಾಂಗ ಎಚ್ಚೆತ್ತುಕೊಂಡು ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ಉಳಿಸುವ ಕೆಲಸ ಮಾಡಬೇಕು’ ಎಂದು ಗಾಯಕಿ ಅರ್ಚನಾ ಉಡುಪ ಅವರು ಕರೆ ನೀಡಿದರು.
ಮಲ್ಲತ್ತಹಳ್ಳಿಯ ಶ್ರೀ ದುರ್ಗಾಪರಮೇಶ್ವರಿ ಎಜುಕೇಶನ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಜೆ.ಎಸ್. ಉತ್ಸವ–2025 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ವಿದೇಶಿ ಸಂಸ್ಕೃತಿಯನ್ನು ವಿದ್ಯಾರ್ಥಿಗಳು ತಿರಸ್ಕರಿಸಿ, ಸಾವಿರಾರು ವರ್ಷಗಳ ಇತಿಹಾಸವಿರುವ ನಮ್ಮ ಭಾಷೆ, ಕನ್ನಡ ಸಂಸ್ಕೃತಿ ಪರಂಪರೆಯನ್ನು ಮೈಗೂಡಿಸಿಕೊಳ್ಳುವ ಮೂಲಕ ನಾನು ಕನ್ನಡಿಗ ಎಂದು ಹೆಮ್ಮೆಯಿಂದ ಹೇಳಿ’ ಎಂದರು.
ಜೆ. ಎಸ್. ಪದವಿ ಪೂರ್ವ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಡಾ. ಜಯರಾಮ ಶೆಟ್ಟಿ ಮಾತನಾಡಿ, ‘ಯುವ ಜನಾಂಗದವರು ಹೊಸ ವಿಷಯ, ಆವಿಷ್ಕಾರ, ಸತತ ಅಭ್ಯಾಸದಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ’ ಎಂದರು.
ನಿರ್ಮಾಣ್ ಸಮೂಹ ಶಿಕ್ಷಣ ಸಮಿತಿಯ ಅಧ್ಯಕ್ಷ ಓ.ಮೋಹನ್ ಕುಮಾರ್, ಪ್ರೊ, ಮುರಳಿದರ್ ಹೆಗಡೆ, ಸಂಸ್ಥೆಯ ಉಪಾಧ್ಯಕ್ಷೆ ಸುಮಾ ಜೆ. ಶೆಟ್ಟಿ, ಕಾರ್ಯದರ್ಶಿ ನಿತೀಶ್, ಪ್ರಾಂಶುಪಾಲೆ ವಿಜಯಲಕ್ಷ್ಮಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.