ADVERTISEMENT

ಸುಧಾಮೂರ್ತಿಗೆ ‘ಪ್ರೆಸ್‌ಕ್ಲಬ್‌ ವರ್ಷದ ವ್ಯಕ್ತಿ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2018, 19:08 IST
Last Updated 28 ಡಿಸೆಂಬರ್ 2018, 19:08 IST
ಸುಧಾಮೂರ್ತಿ
ಸುಧಾಮೂರ್ತಿ   

ಬೆಂಗಳೂರು: ಬೆಂಗಳೂರು ಪ್ರೆಸ್‌ಕ್ಲಬ್ ‘ವರ್ಷದ ವ್ಯಕ್ತಿ ಪ್ರಶಸ್ತಿ’ಗೆ ಇನ್ಫೊಸಿಸ್‌ ಪ್ರತಿಷ್ಠಾನದ ಸುಧಾ ಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ.

ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ 15 ಹಿರಿಯ ಪತ್ರಕರ್ತರಿಗೆ ‘ಪ್ರೆಸ್‌ಕ್ಲಬ್ ವಾರ್ಷಿಕ ಪ್ರಶಸ್ತಿ’ ನೀಡಲಾಗುತ್ತಿದೆ.

ಪ್ರಶಸ್ತಿ ಪುರಸ್ಕೃತರು: ‘ಪ್ರಜಾವಾಣಿ’ ಮತ್ತು ಡೆಕ್ಕನ್‌ ಹೆರಾಲ್ಡ್‌ ಪತ್ರಿಕೆಗಳ ಪ್ರಕಾಶನ ಸಂಸ್ಥೆ ಪ್ರಿಂಟರ್ಸ್‌ (ಮೈಸೂರು) ಪ್ರೈವೇಟ್‌ ಲಿಮಿಟೆಡ್‌ನ ಜಂಟಿ ವ್ಯವಸ್ಥಾಪಕ ನಿರ್ದೇಶಕಕೆ.ಎನ್.ತಿಲಕ್ ಕುಮಾರ್, ಹಿರಿಯ ಪತ್ರಕರ್ತರಾದ ರವಿ ಹೆಗಡೆ, ಕೆ.ಎಸ್.ಸಚ್ಚಿದಾನಂದ ಮೂರ್ತಿ (ಸಚ್ಚಿ), ತಿಮ್ಮಪ್ಪ ಭಟ್, ಎ.ಬಾಲಚಂದ್ರ, ವೆಂಕಟನಾರಾಯಣ, ರಾಮಣ್ಣ ಎಚ್. ಕೋಡಿ ಹೊಸಹಳ್ಳಿ, ತುಂಗಾ ರೇಣುಕಾ, ಕೆ.ವಿ.ಪ್ರಭಾಕರ್, ಡಿ.ಸಿ.ನಾಗೇಶ್, ರಾಜಶೇಖರ್ ಹತಗುಂದಿ, ವೇದಂ ಜಯಶಂಕರ್, ರಾಜಶೇಖರ ಅಬ್ಬೂರು, ಶಿವಾಜಿ ಗಣೇಶನ್, ಕೆ.ಬದ್ರುದ್ದೀನ್ ಮಾಣಿ.

ADVERTISEMENT

ಇದೇ 31ರಂದು ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಿದ್ದಾರೆ. ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.