ಬೆಂಗಳೂರು: ‘ಕೃಷಿಗೆ ಬಳಸುವ ಕ್ರಿಮಿನಾಶಕ, ಬೀಜ, ರಸಗೊಬ್ಬರ, ನೀರಾವರಿ ವಸ್ತುಗಳ ಮೇಲೆ ಜಿಎಸ್‍ಟಿ ಹಾಕಬಾರದು. ನೀರಾವರಿ ಯೋಜನೆಗಳನ್ನು ಸರ್ಕಾರ ತ್ವರಿತವಾಗಿ ಕಾರ್ಯಾರಂಭಿಸಬೇಕು’ ಎಂದುರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿ.ಆರ್.ನಾರಾಯಣರೆಡ್ಡಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ ಈ ಬಜೆಟ್‌ನಲ್ಲಿ ಕೃಷಿಗೆ ಹೆಚ್ಚು ಅನುದಾನ ಮೀಸಲಿಡಬೇಕು. ಡಾ.ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು. ಕಬ್ಬು ಬೆಳೆಗಾರ ಬಾಕಿ ಹಣ ಬಿಡುಗಡೆ ಮಾಡಬೇಕು. ತೆಂಗು, ಅಡಿಕೆ ಮತ್ತು ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸಬೇಕು’ ಎಂದು ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.