ADVERTISEMENT

ಕುಂಬಾರರ ಸಂಘದ ಚುನಾವಣೆಯಲ್ಲಿ ಅಕ್ರಮ ಆರೋಪ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2022, 17:50 IST
Last Updated 26 ಏಪ್ರಿಲ್ 2022, 17:50 IST

ಬೆಂಗಳೂರು: ‘ಕುಂಬಾರರ ಸಂಘದ ಚುನಾವಣೆಯಲ್ಲಿ ಭಾರಿ ಅಕ್ರಮ ನಡೆದಿದ್ದು, ಮತದಾನದಲ್ಲಿ ಅಕ್ರಮಕ್ಕೆ ಅವಕಾಶ ನೀಡಿದ ಚುನಾವಣಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಸಂಘದ ಮುಖಂಡರು ಆಗ್ರಹಿಸಿದ್ದಾರೆ.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುರುಬ ಸಮುದಾಯದ ಮುಖಂಡ ಕೆ.ಮುನಿಸ್ವಾಮಿ, ‘ಮಾ.27ರಂದು ಸಂಘದ ಚುನಾವಣೆ ನಡೆಯಿತು. ಚುನಾವಣಾಧಿಕಾರಿ ಮಂಜುನಾಥ್ ಅವರು ಸಮುದಾಯದ ಒಂದು ಬಣದ ಆಮಿಷಗಳಿಗೆ ಒಳಗಾಗಿ ಅಕ್ರಮಕ್ಕೆ ಅವಕಾಶ ನೀಡಿದ್ದು, ಇದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ’ ಎಂದು ಆರೋಪಿಸಿದರು.

‘ಚುನಾವಣಾಧಿಕಾರಿ ಲಂಚ ಪಡೆದು ಈ ರೀತಿ ಮಾಡಿದ್ದು, ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಸಂಘಕ್ಕೆ ಹೊಸದಾಗಿ ಚುನಾವಣೆ ನಡೆಸಬೇಕು. ಅಲ್ಲಿವರೆಗೆ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.