ADVERTISEMENT

ಎಎಪಿ: ಜು.30ಕ್ಕೆ ಶಿಕ್ಷಣ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 28 ಜುಲೈ 2021, 3:18 IST
Last Updated 28 ಜುಲೈ 2021, 3:18 IST
   

ಬೆಂಗಳೂರು: ‘ಆಮ್‌ ಆದ್ಮಿ ಪಕ್ಷದ ವತಿಯಿಂದ ‘ಶಿಕ್ಷಣ ನಮ್ಮ ಹಕ್ಕು, ಶಿಕ್ಷಣ ನಿಮ್ಮ ಜವಾಬ್ದಾರಿ’ ಎಂಬ ಶೈಕ್ಷಣಿಕ ಸಮ್ಮೇಳನಗಳನ್ನು ಇದೇ 30ರಂದು ಸಂಜೆ 6 ಗಂಟೆಗೆ ಲ್ಯಾವೆಲ್ಲೆ ರಸ್ತೆಯ ರೋಟರಿ ಕ್ಲಬ್‌ನಲ್ಲಿ ಆಯೋಜಿಸಲಾಗಿದೆ’ ಎಂದುಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ತಿಳಿಸಿದರು.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,‘ಪ್ರಸ್ತುತ ಶೈಕ್ಷಣಿಕ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವುದು ಹಾಗೂ ಅಗತ್ಯ ಬದಲಾವಣೆ ತರುವ ಸಂಬಂಧ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.

‘ದೆಹಲಿ ಶಾಸಕಿ ಅತಿಶಿ ಮರ್ಲೆನಾ ಹಾಗೂಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ಶಿಕ್ಷಣಕ್ಕೆ ಸಂಬಂಧಿಸಿದಂತೆ ವಿಶೇಷ ಉಪನ್ಯಾಸ ನೀಡಲಿದ್ದಾರೆ.ನ್ಯಾಷನಲ್ ಲಾ ಸ್ಕೂಲ್‌ನ ಪ್ರಾಧ್ಯಾಪಕ ಬಾಬು ಮ್ಯಾಥ್ಯು, ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.

ADVERTISEMENT

‘ಕರ್ನಾಟಕದ ಶಿಕ್ಷಣ ವ್ಯವಸ್ಥೆಯ ಬಿಕ್ಕಟ್ಟಿಗೆ ಕಾರಣ ಮತ್ತು ಪರಿಹಾರ’ ಚರ್ಚೆಯಲ್ಲಿಕೆಎಎಂಎಸ್‌ನ ಮುಖ್ಯಸ್ಥ ಶಶಿಕುಮಾರ್, ಗುರು ಕಾಶಿನಾಥನ್, ಅಕ್ಷರ ಫೌಂಡೇಷನ್‌ನ ಪುಷ್ಪಾ ತಂತ್ರಿ, ಶಿಕ್ಷಕಿ ಉಷಾ ಮೋಹನ್, ದಕ್ಷ್‌ನ ಸೂರ್ಯ ಪ್ರಕಾಶ್ ಭಾಗವಹಿಸಲಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.