ಸೂಲಿಬೆಲೆ(ಹೊಸಕೋಟೆ): ಸೂಲಿಬೆಲೆ ಹೋಬಳಿಯ ಚಿಕ್ಕಕೋಲಿಗ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ನಡೆಯಿತು.
ನಾಡಪ್ರಭು ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತವಾದವರಲ್ಲ. ಜಾತ್ಯತೀತರಾಗಿ ಸಮಾಜದ ಪ್ರತಿವರ್ಗದ ಏಳಿಗೆಗಾಗಿ ದುಡಿದ ಅವರು ಎಲ್ಲರಿಗೂ ಸಲ್ಲುವವರು, ಅವರನ್ನು ಪ್ರತಿಯೊಬ್ಬರು ಗೌರವಿಸಬೇಕಿದೆ ಎಂದು ಜೇನುಗೂಡು ರೂರಲ್ ಡೆವಲಪ್ಮೆಂಟ್ ಅಂಡ್ ಕಲ್ಚರಲ್ ಟ್ರಸ್ಟ್ ನಿರ್ದೇಶಕ ದೇವಿದಾಸ್ ಸುಬ್ರಯ್ ಸೇಠ್ ಹೇಳಿದರು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಮಾಂಜಿನಪ್ಪ, ಮುಖ್ಯ ಶಿಕ್ಷಕ ಈಶ್ವರಪ್ಪ ಪೂಜಾರಿ, ಟ್ರಸ್ಟ್ ಉಪಾಧ್ಯಕ್ಷ ಕೆ.ಎಂ. ಚೌಡೇಗೌಡ, ಪ್ರಧಾನ ಕಾರ್ಯದರ್ಶಿ ಬೆಟ್ಟಹಳ್ಳಿ ಗೋಪಿನಾಥ್, ಪತ್ರಕರ್ತ ಅತ್ತಿಬೆಲೆ ಮಂಜುನಾಥ್, ಚಿಕ್ಕ ಕೋಲಿಗ ನಾರಾಯಣಸ್ವಾಮಿ, ಹಳೆಯ ವಿದ್ಯಾರ್ಥಿ ಪ್ರತಾಪ್ ಅಡುಗೆ ಸಿಬ್ಬಂದಿ ನಾಗವೇಣಮ್ಮ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.