ADVERTISEMENT

12ರಂದು ಬಿಡಿಎ ಕಚೇರಿ ಮುಂದೆ ಪ್ರತಿಭಟನೆ

ಪೆರಿಫೆರಲ್ ಭೂಸ್ವಾಧೀನ ರೈತರ ಹೋರಾಟ ಸಮಿತಿಯ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2022, 19:58 IST
Last Updated 7 ಜುಲೈ 2022, 19:58 IST

ಬೆಂಗಳೂರು: ಪೆರಿಫೆರಲ್‌ ವರ್ತುಲ ರಸ್ತೆ (ಪಿಆರ್‌ಆರ್) ಯೋಜನೆಯನ್ನು 2013ರ ಕೇಂದ್ರ ಸರ್ಕಾರದ ಭೂಸ್ವಾಧೀನ ಮತ್ತು ಪುನರ್ವಸತಿ ಕಾಯ್ದೆಯಡಿ ರೂಪಿಸಬೇಕು. ಇಲ್ಲದಿದ್ದರೆ ಯೋಜನೆಯನ್ನು ರದ್ದುಗೊಳಿಸ
ಬೇಕು ಎಂದು ಆಗ್ರಹಿಸಿ ಜುಲೈ 12ರಂದು ಬಿಡಿಎ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಪೆರಿಫೆರಲ್ ಭೂಸ್ವಾಧೀನ ರೈತರ ಹೋರಾಟ ಸಮಿತಿ ತಿಳಿಸಿದೆ.

ಬೆಂಗಳೂರಿನ ಉತ್ತರ ಭಾಗದಲ್ಲಿ ರುವ 65 ಕಿ.ಮೀ. ವರ್ತುಲ ರಸ್ತೆ ಅಭಿವೃದ್ಧಿಗೆ 2005ರಲ್ಲಿ ಬಿಡಿಎ ಯೋಜನೆ ರೂಪಿಸಿ, 1,810 ಎಕರೆ ರೈತರ ಭೂಮಿ ಸ್ವಾಧೀನ ಪಡಿಸಿಕೊಳ್ಳಲು ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. ಆದರೆ ಇದುವರೆಗೂ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಇದರಿಂದ ಈ ಭಾಗದ ರೈತ ಕುಟುಂಬಗಳು ಕಂಗಾಲಾಗಿವೆ. ಇದಕ್ಕೆ ಸಂಬಂಧಿಸಿದಂತೆ ಬಿಡಿಎ ಮತ್ತು ಸರ್ಕಾರಕ್ಕೆ ಅನೇಕ ಬಾರಿ ಮನವಿ ಸಲ್ಲಿಸಿದರೂ ರೈತರಿಗೆ ಪರಿಹಾರ ನೀಡುವ ಕುರಿತು ತೀರ್ಮಾನ ಕೈಗೊಂಡಿಲ್ಲ ಎಂದು ಸಮಿತಿ ಸದಸ್ಯ ಶ್ರೀನಿವಾಸ ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಜನವರಿ 1, 2022ರಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಅಬ್ದುಲ್‌ ನಜೀರ್‌ ಪೀಠವು, ಬಿಡಿಎಗೆ 2013ರ ಭೂಸ್ವಾಧೀನ ಮತ್ತು ಪುನರ್ ವಸತಿ ಕಾಯ್ದೆ ಅನ್ವಯಿಸುವುದಿಲ್ಲ. 1894ರ ಕಾಯ್ದೆ ಅಡಿಯಲ್ಲಿ ಬರುವ ಬಿಡಿಎ ಕಾಯ್ದೆಯಡಿ ಪರಿಹಾರವನ್ನು ನೀಡಿ ಯೋಜನೆ ಮುಂದುವರಿಸಬೇಕು ಎಂದು ನಿರ್ದೇಶಿಸಿತ್ತು. ಇದನ್ನೇ ಆಧರಿಸಿ 2013ರ ಭೂಸ್ವಾಧೀನ ಮತ್ತು ಪುನರ್ ವಸತಿ ಕಾಯ್ದೆ ಬಿಡಿಎಗೆ ಅನ್ವಯಿಸುವು
ದಿಲ್ಲ ಎಂದು ಬಿಡಿಎ ಅಧಿಕಾರಿಗಳು ಹೇಳುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ADVERTISEMENT

ಸದ್ಯ ಈ ಪ್ರದೇಶದಲ್ಲಿ ಒಂದು ಎಕರೆ ಜಮೀನಿಗೆ ₹4–5 ಕೋಟಿ ಮಾರುಕಟ್ಟೆ ಬೆಲೆ ಇದೆ. ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳು ಈ ಪ್ರದೇಶದಲ್ಲಿ ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದ್ದಾರೆ ಎಂದು ಸಮಿತಿ ಸದಸ್ಯರು ಆರೋಪಿಸಿದರು.

’ಬೆಂಗಳೂರಿನ ಅಭಿವೃದ್ಧಿಗಾಗಿ ವರ್ತುಲ ರಸ್ತೆ ಯೋಜನೆಗೆ ನಾವು ಜಮೀನು ನೀಡಲು ಸಿದ್ಧರಿದ್ದೇವೆ. ಆದರೆ 2013ರ ಭೂಸ್ವಾಧೀನ ಕಾಯ್ದೆ ಅಡಿಯಲ್ಲಿ ಬೆಲೆ ನಿಗದಿ ಪಡಿಸಿ ಖರೀದಿಸಬೇಕು. ಇಲ್ಲದಿದ್ದರೆ ಈ ಯೋಜನೆಯನ್ನು ರದ್ದುಗೊಳಿಸ
ಬೇಕು. ಸುಮಾರು 18 ವರ್ಷಗಳಿಂದ ಹೋರಾಟ ನಡೆಸಿದರೂ ಇದುವರೆಗೂ ಕ್ರಮ ಕೈಗೊಳ್ಳದಿರುವುದು ಬಿಡಿಎ ಬೇಜವಾಬ್ದಾರಿತನಕ್ಕೆ ಸಾಕ್ಷಿ‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.