ADVERTISEMENT

ಪ್ರಾಥಮಿಕ ಆರೋಗ್ಯ ಕೇಂದ್ರ ಸೀಲ್‍ಡೌನ್

​ಪ್ರಜಾವಾಣಿ ವಾರ್ತೆ
Published 18 ಜುಲೈ 2020, 22:09 IST
Last Updated 18 ಜುಲೈ 2020, 22:09 IST

ಹೆಸರಘಟ್ಟ: ಐವರಕಂಡಪುರ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಆರೋಗ್ಯ ಕೇಂದ್ರವನ್ನು ಮೂರು ದಿನಗಳ ಕಾಲ ಸೀಲ್‍ಡೌನ್ ಮಾಡಲಾಗಿದೆ.

ಕೊರೊನಾ ಸೋಂಕಿನ ಲಕ್ಷಣಗಳು ಇದ್ದ ಕಾರಣ ಸೋಂಕಿತರು ಸ್ವಯಂ ತಪಾಸಣೆಗೆ ಒಳಪಟ್ಟಿದ್ದರು. ಸೋಂಕು ಇರುವುದುಶನಿವಾರ ದೃಢಪಟ್ಟಿದ್ದರಿಂದ ಆರೋಗ್ಯ ಕೇಂದ್ರಕ್ಕೆ ಸೋಂಕು ನಿವಾರಕ ಸಿಂಪಡಿಸಿ ಸೀಲ್ ಡೌನ್ ಮಾಡಲಾಗಿದೆ ಎಂದು ಐವರಕಂಡಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ರತ್ನಪ್ರಭಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT