ADVERTISEMENT

ಬಸವನಗುಡಿ ಅಭಿವೃದ್ಧಿಗೆ ಒತ್ತು: ಅರಮನೆ ಶಂಕರ್

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2023, 22:52 IST
Last Updated 23 ಮಾರ್ಚ್ 2023, 22:52 IST

ಬೆಂಗಳೂರು: ‘ಪಾರಂಪರಿಕ ಮತ್ತು ಐತಿಹಾಸಿಕ ಯಾತ್ರಾ ಸ್ಥಳಗಳನ್ನು ಹೊಂದಿರುವ ಬಸವನಗುಡಿ ವಿಧಾನಸಭೆ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲಾಗುವುದು’ ಎಂದು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅರಮನೆ ಶಂಕರ್ ತಿಳಿಸಿದರು.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ಕ್ಷೇತ್ರದ ಎಲ್ಲಾ ಪ್ರಮುಖ ಪೂಜಾ ಸ್ಥಳಗಳಲ್ಲೂ ಅದ್ದೂರಿ ಯಾಗಿ ಹಬ್ಬ ಆಚರಿಸಲು ಕ್ರಮವಹಿಸಲಾಗುವುದು. ಇಲ್ಲಿನ ಸರ್ಕಾರಿ ಶಾಲೆ
ಗಳನ್ನು ದತ್ತು ಪಡೆದು, ಖಾಸಗಿ ಶಾಲೆ ಗಳಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಸರ್ಕಾರಿ ಕಚೇರಿ
ಗಳಲ್ಲಿ ಪಾರದರ್ಶಕ ಆಡಳಿತಕ್ಕೆ ಆದ್ಯತೆ ನೀಡಲಾಗುವುದು. ಅಪರಾಧ ಕೃತ್ಯ ಗಳನ್ನು ತಡೆಗಟ್ಟಲು ಆಧುನಿಕ ತಂತ್ರಜ್ಞಾನ
ಗಳನ್ನು ಬಳಸಿಕೊಳ್ಳಲಾಗುವುದು’ ಎಂದರು.

‘ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶಾಲಾ ಪ್ರವೇಶಕ್ಕೆ ಆರ್ಥಿಕ ಸಹಾಯ ನೀಡಲಾಗುವುದು. ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಮಹಿಳೆಯರು, ಯುವಜನರಿಗೆ ಕೌಶಲ ತರಬೇತಿ ಯೋಜನೆಗಳನ್ನು ಹಮ್ಮಿಕೊಳ್ಳ
ಲಾಗುವುದು. ಹೈಟೆಕ್ ಗ್ರಂಥಾಲಯ ನಿರ್ಮಾಣ, ಪೌರಕಾರ್ಮಿಕ ಮಹಿಳೆ ಯರಿಗೆ ವಿಶ್ರಾಂತಿ ಕೊಠಡಿ ಸೇರಿ ವಿವಿಧ ಯೋಜನೆಗಳನ್ನು ಜಾರಿ ಮಾಡಲಾಗುವುದು’ ಎಂದು ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.