ADVERTISEMENT

ಖಾಸಗಿ ಬಸ್– ಬೈಕ್ ಅಪಘಾತ: ಹಿಂಬದಿ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2024, 16:11 IST
Last Updated 14 ಫೆಬ್ರುವರಿ 2024, 16:11 IST
<div class="paragraphs"><p>ಸಾವು–ಪ್ರಾತಿನಿಧಿಕ ಚಿತ್ರ</p></div>

ಸಾವು–ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಬಳ್ಳಾರಿ ರಸ್ತೆಯ ವಿದ್ಯಾನಗರ ವೃತ್ತದಲ್ಲಿ ಮಂಗಳವಾರ ರಾತ್ರಿ ಅಪಘಾತ ಸಂಭವಿಸಿದ್ದು, ಆಶೀಸ್ ಜೀಜಾ (22) ಅವರು ಮೃತಪಟ್ಟಿದ್ದಾರೆ.

‘ಕೇರಳದ ಆಶೀಸ್, ಕಟ್ಟಡ ನಿರ್ಮಾಣ ಕಂಪನಿಯೊಂದರ ಲೆಕ್ಕಾಧಿಕಾರಿ. ನಾರಾಯಣಪುರದಲ್ಲಿ ವಾಸವಿದ್ದರು. ಸ್ನೇಹಿತನ ಜೊತೆ ಬೈಕ್‌ನಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಚಿಕ್ಕಜಾಲ ಸಂಚಾರ ಠಾಣೆ ಪೊಲೀಸರು ಹೇಳಿದರು.

ADVERTISEMENT

‘ಸ್ನೇಹಿತ, ಬೈಕ್‌ ಚಲಾಯಿಸುತ್ತಿದ್ದರು. ಹಿಂಬದಿಯಲ್ಲಿ ಆಶೀಸ್ ಕುಳಿತಿದ್ದರು. ವಿದ್ಯಾನಗರ ವೃತ್ತದ ಸರ್ವೀಸ್‌ ರಸ್ತೆಯಲ್ಲಿ ರಾತ್ರಿ 8.15 ಗಂಟೆ ಸುಮಾರಿಗೆ ಬೈಕ್ ಹೊರಟಿತ್ತು. ಇದೇ ಮಾರ್ಗದಲ್ಲಿ ತೆರಳುತ್ತಿದ್ದ ಖಾಸಗಿ ಬಸ್, ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ಬೈಕ್ ಸಮೇತ ಉರುಳಿಬಿದ್ದ ಆಶೀಸ್ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಯೇ ಅವರು ಮೃತಪಟ್ಟಿದ್ದಾರೆ’ ಎಂದು ತಿಳಿಸಿದರು.

‘ಅಪಘಾತದಲ್ಲಿ ಸ್ನೇಹಿತನಿಗೆ ಸಣ್ಣ–ಪುಟ್ಟ ಗಾಯಗಳಾಗಿವೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.