
ಬೆಂಗಳೂರು: ತೆರಿಗೆ ಪಾವತಿಸದೇ ವಂಚಿಸುತ್ತಿದ್ದ ಖಾಸಗಿ ಬಸ್‌ಗಳನ್ನು ಸಾರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ನಗರದ ಹೊರ ವಲಯದ ಅತ್ತಿಬೆಲೆ ಚೆಕ್‌ಪೋಸ್ಟ್‌ನಲ್ಲಿ ಶುಕ್ರವಾರ ಬೆಳಿಗ್ಗೆಯಿಂದಲೇ ಜಂಟಿ ಆಯುಕ್ತರಾದ ಎಂ.ಪಿ.ಓಂಕಾರೇಶ್ವರಿ, ಎಂ.ಶೋಭಾ, ಎನ್.ಜಿ.ಗಾಯತ್ರಿದೇವಿ ಅವರ ನೇತೃತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ತೆರಿಗೆ ಪಾವತಿಸದೇ ಬಸ್‌ನಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದುದು ಕಂಡು ಬಂತು. 30ಕ್ಕೂ ಹೆಚ್ಚು ಬಸ್‌ಗಳನ್ನು ಈ ವೇಳೆ ವಶಪಡಿಸಿಕೊಳ್ಳಲಾಯಿತು.
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದವರಿಗೆ ತೊಂದರೆ ಆಗದಂತೆ ಪರ್ಯಾಯ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಸಿಬ್ಬಂದಿ ಮಾಡಿದರು. ಪ್ರಯಾಣಿಕರಿಂದ ಯಾವುದೇ ಹಣ ಪಡೆಯದೇ ನಿಗದಿತ ಸ್ಥಳಗಳಿಗೆ ಬಿಡಲು ವ್ಯವಸ್ಥೆಯನ್ನೂ ಮಾಡಲಾಯಿತು.
ಈ ವೇಳೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ದೀಪಕ್, ಪ್ರಮತೇಶ ಹಾಗೂ ರಾಜಕುಮಾರ್, ಮೋಟಾರು ವಾಹನ ನಿರೀಕ್ಷಕರಾದ ನವೀನ, ವಿಶ್ವನಾಥ್ ಶೆಟ್ಟಿ, ಅಮೂಲ್ಯಾ, ಸುಧಾಕರ್, ನರಸಿಂಹಮೂರ್ತಿ ಹಾಗೂ ರಾಜೇಶ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.