ADVERTISEMENT

ಶುಲ್ಕ ಹೆಚ್ಚಳಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2019, 19:40 IST
Last Updated 7 ಫೆಬ್ರುವರಿ 2019, 19:40 IST

ಬೆಂಗಳೂರು: ಎಂಜಿನಿಯರಿಂಗ್‌ ಕೋರ್ಸ್‌ಗಳ ಶುಲ್ಕವನ್ನು ಈ ಶೈಕ್ಷಣಿಕ ವರ್ಷದಿಂದ ಹೆಚ್ಚಿಸಬೇಕು ಎಂದು ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ.

‘ವೈದ್ಯಕೀಯ ಕೋರ್ಸ್‌ಗಳಿಗೆ ಶೇ 10 ರಷ್ಟು ಹೆಚ್ಚಿಸಲಾಗಿದೆ. ಆದ್ದರಿಂದ, ಎಂಜಿನಿಯರಿಂಗ್‌ ಕೊರ್ಸ್‌ಗಳ ಶುಲ್ಕ
ವನ್ನು ಸೂಕ್ತ ರೀತಿಯಲ್ಲಿ ಹೆಚ್ಚಿಸಬೇಕು ಎಂದು ವೈದ್ಯ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ’ ಕರ್ನಾಟಕ ರಾಜ್ಯ ಅನುದಾನ ರಹಿತ ಎಂಜಿನಿಯರಿಂಗ್ ಕಾಲೇಜುಗಳ ಸಂಘದ ಕಾರ್ಯದರ್ಶಿ ಡಾ.ಎಂ.ಕೆ. ಪಾಂಡುರಂಗಶೆಟ್ಟಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ಶುಲ್ಕ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಂಘದ ಪದಾಧಿಕಾರಿಗಳು ಒಂದು ಸುತ್ತಿನ ಚರ್ಚೆ ನಡೆಸಿದ್ದೇವೆ. ಸರ್ಕಾರಕ್ಕೆ ಇನ್ನೂ ಪ್ರಸ್ತಾವನೆ ಸಲ್ಲಿಸಲಿಲ್ಲ. ರಾಜ್ಯ ಸರ್ಕಾರ ಸದ್ಯವೇ ಮಾತುಕತೆಗೆ ಕರೆಯಲಿದ್ದು, ಆ ಸಂದರ್ಭದಲ್ಲಿ ಪ್ರಸ್ತಾವನೆ ಸಲ್ಲಿಸುತ್ತೇವೆ. ಶೇ 10 ರಷ್ಟು ಹೆಚ್ಚಳ ಮಾಡಬೇಕು ಎಂಬ ಒತ್ತಡ ಹೇರುವುದಿಲ್ಲ. ಕಳೆದಮೂರು ವರ್ಷಗಳಿಂದ ಏರಿಕೆ ಮಾಡಿಲ್ಲ. ಸೂಕ್ತವಾಗಿ ಹೆಚ್ಚಳ ಮಾಡಿ ಎಂಬ ಬೇಡಿಕೆ ಸಲ್ಲಿಸುತ್ತೇವೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.