ADVERTISEMENT

ಖಾಸಗಿ ವಿ.ವಿ. ಅಧ್ಯಯನಕ್ಕೆ ಸಮಿತಿ

ಪ್ರವೇಶಾತಿ, ಸಿಬ್ಬಂದಿ ನೇಮಕದಲ್ಲಿ ನಿಯಮ ಉಲ್ಲಂಘನೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2019, 20:03 IST
Last Updated 18 ಜೂನ್ 2019, 20:03 IST

ಬೆಂಗಳೂರು: ಖಾಸಗಿ ವಿಶ್ವವಿದ್ಯಾಲಯಗಳ ಕಾರ್ಯವಿಧಾನಗಳ ಬಗ್ಗೆ ಅಧ್ಯಯನ ನಡೆಸುವುದಕ್ಕೆ ಉನ್ನತ ಶಿಕ್ಷಣ ಇಲಾಖೆ ಪರಿಣಿತರ ಸಮಿತಿಯೊಂದನ್ನು ರಚಿಸಿದೆ.

ಕೆಲವು ವಿಶ್ವವಿದ್ಯಾಲಯಗಳು ಪ್ರವೇಶ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಪಾಲಿಸುತ್ತಿಲ್ಲ, ಸಿಬ್ಬಂದಿ ನೇಮಕದಲ್ಲಿ ರೋಸ್ಟರ್‌ ಅನ್ನು ಇಟ್ಟುಕೊಳ್ಳುವುದಿಲ್ಲ, ರ‍್ಯಾಗಿಂಗ್‌, ಕಿರುಕುಳ ತಡೆಗಟ್ಟುತ್ತಿಲ್ಲ ಮೊದಲಾದ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ಸಮಿತಿ ವಿ.ವಿ.ಗಳಿಗೆ ಭೇಟಿ ನೀಡಿ ಮುಂದಿನ ಕ್ರಮಕ್ಕಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.

ಅಲಯನ್ಸ್‌ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ.ಡಿ.ಅಯ್ಯಪ್ಪ ಅವರು ಸಮಿತಿಯ ನೇತೃತ್ವ ವಹಿಸಲಿದ್ದು, ಒಟ್ಟು 18 ವಿಶ್ವವಿದ್ಯಾಲಯಗಳಿಗೆ ಭೇಟಿ ನೀಡಲಿದೆ. ಮೊದಲ ಹಂತದಲ್ಲಿ 11 ವಿಶ್ವವಿದ್ಯಾಲಯಗಳಿಗೆ ಭೇಟಿ ನೀಡಲಿದೆ.

ADVERTISEMENT

ವಿಧಾನಮಂಡಲ ಅಧಿವೇಶನಗಳಲ್ಲೇ ಖಾಸಗಿ ವಿಶ್ವವಿದ್ಯಾಲಯಗಳು ನಿಯಮ ಉಲ್ಲಂಘಿಸುವ ಬಗ್ಗೆ ಚರ್ಚೆಗಳು ನಡೆದಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.