ADVERTISEMENT

ಸವಾಲು ಎದುರಿಸಲು ಖಾಸಗಿ ವಿವಿಗಳು ಬದ್ಧ: ಕೆ.ಸಿ. ರಾಮಮೂರ್ತಿ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2025, 20:14 IST
Last Updated 23 ಆಗಸ್ಟ್ 2025, 20:14 IST
‘ಕರ್ನಾಟಕದಲ್ಲಿ ಖಾಸಗಿ ವಿಶ್ವವಿದ್ಯಾಲಯಗಳ ಕಾರ್ಯನಿರ್ವಹಣೆ’ ವಿಚಾರ ಸಂಕಿರಣದಲ್ಲಿ ಎಸ್. ಚಂದ್ರಶೇಖರ್ ಶೆಟ್ಟಿ ಮಾತನಾಡಿದರು
‘ಕರ್ನಾಟಕದಲ್ಲಿ ಖಾಸಗಿ ವಿಶ್ವವಿದ್ಯಾಲಯಗಳ ಕಾರ್ಯನಿರ್ವಹಣೆ’ ವಿಚಾರ ಸಂಕಿರಣದಲ್ಲಿ ಎಸ್. ಚಂದ್ರಶೇಖರ್ ಶೆಟ್ಟಿ ಮಾತನಾಡಿದರು   

ಬೆಂಗಳೂರು: ‘ಖಾಸಗಿ ವಿಶ್ವವಿದ್ಯಾಲಯಗಳು ಶೈಕ್ಷಣಿಕ, ಔದ್ಯೋಗಿಕ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿವೆ. 21 ನೇ ಶತಮಾನದ ಸವಾಲುಗಳಿಗೆ ಭಾರತದ ಯುವ ಸಮುದಾಯವನ್ನು ರೂಪಿಸಲು ಬದ್ಧವಾಗಿವೆ’ ಎಂದು ಸಿಎಂಆರ್ ವಿಶ್ವವಿದ್ಯಾಲಯ ಮತ್ತು ಸಿಎಂಆರ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ಸಿ. ರಾಮಮೂರ್ತಿ ಹೇಳಿದರು.

ಬಾಗಲೂರಿನಲ್ಲಿರುವ ಲೇಕ್ ಸೈಡ್ ಕ್ಯಾಂಪಸ್ ಸಭಾಂಗಣದಲ್ಲಿ ಶನಿವಾರ ಸಿಎಂಆರ್ ವಿಶ್ವವಿದ್ಯಾಲಯ ಹಾಗೂ ಕರ್ನಾಟಕದ ವಿಶ್ರಾಂತ ಕುಲಪತಿಗಳ ವೇದಿಕೆ (ಎಫ್‍ವಿಸಿಕೆ) ಆಯೋಜಿಸಿದ್ದ ‘ಕರ್ನಾಟಕದಲ್ಲಿ ಖಾಸಗಿ ವಿಶ್ವವಿದ್ಯಾಲಯಗಳ ಕಾರ್ಯನಿರ್ವಹಣೆ’ ಒಂದು ದಿನದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

‘ಖಾಸಗಿ ವಿಶ್ವವಿದ್ಯಾಲಯಗಳನ್ನು ಬಲಪಡಿಸಲು, ವಿಶ್ವಾಸಾರ್ಹತೆ ಹೆಚ್ಚಿಸಲು, ಪೂರ್ಣ ಸಾಮರ್ಥ್ಯದಿಂದ ಕಾರ್ಯನಿರ್ವಹಿಸಲು ಅನುವು ಮಾಡಿಕೊಡಬೇಕು. ಅದಕ್ಕೆ ಬೇಕಾದ ರಚನಾತ್ಮಕ ಮಾರ್ಗವನ್ನು ತಯಾರಿಸಿಕೊಳ್ಳಬೇಕು’ ಎಂದು ತಿಳಿಸಿದರು.

ADVERTISEMENT

ಎಫ್‍ವಿಸಿಕೆ ಅಧ್ಯಕ್ಷ ಎಸ್. ಚಂದ್ರಶೇಖರ್ ಶೆಟ್ಟಿ ಉದ್ಘಾಟಿಸಿದರು. ಕಾರ್ಯದರ್ಶಿ ಎಚ್. ಮಹೇಶಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಎಂಆರ್ ವಿಶ್ವವಿದ್ಯಾಲಯದ ಕುಲಪತಿ ಎಚ್. ಬಿ. ರಾಘವೇಂದ್ರ, ಸಿಎಂಆರ್ ವಿಶ್ವವಿದ್ಯಾಲಯದ ಸಹಕುಲಾಧಿಪತಿ ಪ್ರವೀಣ್ ಆರ್., ಕುಲಸಚಿವ ಧನಂಜಯ ಎಂ. ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.