ಪ್ರಿಯಾಂಕ್ ಖರ್ಗೆ
ಬೆಂಗಳೂರು: ‘ಸರ್ಕಾರಿ, ಅನುದಾನಿತ ಶಾಲಾ–ಕಾಲೇಜುಗಳ ಮೈದಾನದಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿರ್ಬಂಧಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿ.ಎಂ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರ ಸಂವಿಧಾನ ಬದ್ಧ ವಾಗಿದೆ’ ಎಂದು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆಯ ಎಸ್‌ಸಿ, ಎಸ್‌ಟಿ ಅಧಿಕಾರಿಗಳ ಮತ್ತು ನೌಕರರ ಕಲ್ಯಾಣ ಸಂಘದ ರಾಜ್ಯ ಘಟಕದ ಅಧ್ಯಕ್ಷ
ಎಂ. ಸುರೇಶ್ ಕುಮಾರ್ ತಿಳಿಸಿದರು.
‘ಪ್ರಿಯಾಂಕ್ ಅವರು ಆರ್‌ಎಸ್‌ಎಸ್ ನಿರ್ಬಂಧಿಸುವಂತೆ ಎಲ್ಲೂ ಹೇಳಿಲ್ಲ. ಆದರೆ, ಕೆಲ ಮನುವಾದಿ ಮನಸ್ಥಿತಿಯ ಮುಖಂಡರು ಈ ಬಗ್ಗೆ ತಪ್ಪು ಸಂದೇಶ ನೀಡುತ್ತಿರುವುದು ಸರಿಯಲ್ಲ’ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಎಸ್‌ಸಿ, ಎಸ್‌ಟಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಡಿ. ಶಿವಶಂಕರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.