ADVERTISEMENT

ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಪ್ರಿಯಾಂಕ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2019, 19:57 IST
Last Updated 27 ಏಪ್ರಿಲ್ 2019, 19:57 IST
ಪ್ರಿಯಾಂಕ್ ಎಂ. ಖರ್ಗೆ
ಪ್ರಿಯಾಂಕ್ ಎಂ. ಖರ್ಗೆ   

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳ ಜತೆಗೆ ಸಚಿವ ಪ್ರಿಯಾಂಕ್‌ ಖರ್ಗೆ ಶನಿವಾರ ಸಭೆ ನಡೆಸಿದರು.

ಚುನಾವಣಾ ನೀತಿ ಸಂಹಿತೆ ಮುಕ್ತಾಯಗೊಳ್ಳುತ್ತಿದ್ದಂತೆ ಇಲಾಖೆಯ ಕಾರ್ಯಕ್ರಮಗಳಿಗೆ ಪುನರ್ ಚಾಲನೆ ನೀಡಲು ಅಧಿಕಾರಿಗಳಿಗೆ ಅವರು ಸೂಚಿಸಿದರು.

ನೀತಿ ಸಂಹಿತೆ ಮುಗಿಯುತ್ತಿದ್ದಂತೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮಗಳ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಬೇಕು ಎಂದು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಿದರು.

ADVERTISEMENT

2019-20ನೇ ಸಾಲಿನ ಯೋಜನೆಗಳ ಟೆಂಡರುಗಳನ್ನು ಈ ತಿಂಗಳ ಅಂತ್ಯದೊಳಗೆ ಕರೆಯಲು ಸಜ್ಜಾಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಕ್ರೈಸ್ ಸಂಸ್ಥೆಯ ಅಧೀನದ ವಸತಿ ಶಾಲೆಗಳ ಮಕ್ಕಳಿಗೆ ಶಾಲೆಯ ಆರಂಭದ ದಿನವೇ ಸಮವಸ್ತ್ರ, ಬ್ಯಾಗ್, ಶೂ, ಸಾಕ್ಸ್, ನೋಟ್ ಪುಸ್ತಕ ವಿತರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಸಚಿವರು ಆದೇಶಿಸಿದರು. ಐರಾವತ, ಸಮೃದ್ಧಿ, ಉನ್ನತಿ, ಪ್ರಬುದ್ಧ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕ ರೀತಿಯಲ್ಲಿ ತಲುಪಿಸಲು ಆದ್ಯತೆ ನೀಡಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.