ADVERTISEMENT

ಕನ್ನಡಪರ ಸಂಘಟನೆಗಳ ಮುಖಂಡರು ಚುನಾವಣೆಗೆ ಸ್ಪರ್ಧಿಸಿ: ವಾಟಾಳ್ ನಾಗರಾಜ್‌

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2024, 17:14 IST
Last Updated 21 ಮಾರ್ಚ್ 2024, 17:14 IST
<div class="paragraphs"><p>ವಾಟಾಳ್ ನಾಗರಾಜ್‌</p></div>

ವಾಟಾಳ್ ನಾಗರಾಜ್‌

   

ಬೆಂಗಳೂರು: ‘ರಾಜ್ಯದಲ್ಲಿರುವ ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕು‘ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕರೆ ನೀಡಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತತ್ವ, ಸಿದ್ಧಾಂತದ ಮೇಲೆ ಚುನಾವಣೆ ನಡೆಯಬೇಕು. ಜಾತಿ, ಭ್ರಷ್ಟಾಚಾರ, ಉಡುಗೊರೆ ಹಂಚಿಕೆಯೇ ಚುನಾವಣೆ ಆಗಬಾರದು. ಕರ್ನಾಟಕದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೂರು ಪಕ್ಷಗಳಲ್ಲಿ ಜಾತಿವಾದಿಗಳು ಮತ್ತು ಭ್ರಷ್ಟರು ಇದ್ದಾರೆ. ಚುನಾವಣೆ ವ್ಯವಸ್ಥೆ ಹದಗೆಟ್ಟಿದೆ. ಚುನಾವಣೆ ಎಂದರೆ ದರೋಡೆ ಎನ್ನುವಂತಾಗಿದೆ’ ಎಂದು ದೂರಿದರು.

ADVERTISEMENT

‘ದೇಶದಲ್ಲಿರುವ ಎಲ್ಲ ಪಕ್ಷಗಳು ಕುಟುಂಬ ರಾಜಕಾರಣ ಮಾಡುತ್ತಿವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಸರಿಯಾದ ಕ್ರಮವಲ್ಲ. ಪ್ರತಿಯೊಬ್ಬ ಪ್ರಜೆಯೂ ಈ ಜನತಂತ್ರ ಹಬ್ಬದಲ್ಲಿ ಪಾಲ್ಗೊಳ್ಳಬೇಕು. ಸದ್ಯ, ಚುನಾವಣೆ ಎಂದರೆ ಭಯದ ವಾತಾವರಣ ನಿರ್ಮಾಣವಾಗಿದ್ದು, ಚುನಾವಣೆ ವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ. ಇದನ್ನು ಯಾರಿಗೆ ಪ್ರಶ್ನಿಸಬೇಕು ಎಂಬುದು ತಿಳಿಯುತ್ತಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.