ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ.ಬಿ.ರಮೇಶ್ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು.
ವಿಶ್ವವಿದ್ಯಾಲಯದ ಕುಲಾಧಿಪತಿಯೂ ಆದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ನೂತನ ಕುಲಪತಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಪ್ರಭಾರ ಕುಲಪತಿ ಪ್ರೊ. ಕೆ.ಆರ್.ಜಲಜಾ ಅವರು ರಮೇಶ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ತುಮಕೂರು ವಿಶ್ವವಿದ್ಯಾಲಯದ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ರಮೇಶ್ ಅವರು, ಪ್ರಸ್ತುತ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಮೌಲ್ಯಮಾಪನ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಈ ಸಂದರ್ಭದಲ್ಲಿ ಕುಲಸಚಿವ ಎ. ನವೀನ್ ಜೋಸೆಫ್, ವಿತ್ತಾಧಿಕಾರಿ ಎಂ.ವಿ. ವಿಜಯಲಕ್ಷ್ಮಿ, ಸಿಂಡಿಕೇಟ್ ಸದಸ್ಯರು, ಡೀನ್‌ಗಳು, ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ ಹಾಜರಿದ್ದು ಶುಭ ಕೋರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.