
ಪ್ರಜಾವಾಣಿ ವಾರ್ತೆ
ಬೆಂಗಳೂರು: ಕೋವಿಡ್ ಹರಡುವಿಕೆ ತಡೆಗಾಗಿ ನಗರದಲ್ಲಿ ಸೆಕ್ಷನ್ 144ರಡಿ ಜಾರಿಗೊಳಿಸಲಾಗಿರುವ ನಿಷೇಧಾಜ್ಞೆಯನ್ನು ಜ. 31ರವರೆಗೆ ವಿಸ್ತರಣೆ ಮಾಡಿ ಪೊಲೀಸ್ ಕಮಿಷನರ್ ಕಮಲ್ ಪಂತ್ ಸೋಮವಾರ ಆದೇಶ ಹೊರಡಿಸಿದ್ದಾರೆ.
‘ರಾಜ್ಯ ಸರ್ಕಾರದ ನಿರ್ದೇಶನಗಳ ಅನ್ವಯ ಈ ಆದೇಶ ಹೊರಡಿಸಲಾಗಿದೆ. ಸರ್ಕಾರ ರೂಪಿಸಿರುವ ಎಲ್ಲ ನಿಯಮಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಬೇಕು. ಇಲ್ಲದಿದ್ದರೆ, ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದೂ ಆದೇಶದಲ್ಲಿ ಎಚ್ಚರಿಸಿದ್ದಾರೆ
‘ಐದು ಜನಕ್ಕಿಂತ ಹೆಚ್ಚು ಮಂದಿ ಗುಂಪು ಸೇರಬಾರದು. ರ‍್ಯಾಲಿ, ಧರಣಿ, ಮದುವೆ ಸಮಾರಂಭ ಆಯೋಜನೆಗೂ ನಿಯಮ ಅನ್ವಯವಾಗಲಿದೆ’ ಎಂದೂ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.