ಬೆಂಗಳೂರು: ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಜುಲೈ 5ರಿಂದ 12ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ–3 ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪರೀಕ್ಷೆಯನ್ನು ಸುಸೂತ್ರ ಹಾಗೂ ದೋಷರಹಿತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷೆ ನಡೆಯುವ ಸಮಯದಲ್ಲಿ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಈ ವ್ಯಾಪ್ತಿಯ ಜೆರಾಕ್ಸ್, ಸೈಬರ್ ಹಾಗೂ ಕಂಪ್ಯೂಟರ್ ಸೆಂಟರ್‌ಗಳನ್ನು ಮುಚ್ಚುವಂತೆ ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು ಆದೇಶಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.