ಯಲಹಂಕ: ಹೆಬ್ಬಾಳದ ಏಟ್ರಿಯಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ (ಎಬಿವಿಪಿ) ಸಹಯೋಗದಲ್ಲಿ ಸೃಷ್ಟಿ–2024ರಲ್ಲಿ ತಂತ್ರಜ್ಞಾನಗಳ ಆಧಾರಿತ ಮಾದರಿಗಳ ಪ್ರದರ್ಶನ, ಸ್ಪರ್ಧಾ ಕಾರ್ಯಕ್ರಮ ನಡೆಯಿತು.
ಚಾಲನೆ ನೀಡಿದ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಉಪಾಧ್ಯಕ್ಷ ದೀಪಕ್ ಕುಮಾರ್ ಶ್ರೀವಾಸ್ತವ ಅವರು, ‘ವಿದ್ಯಾರ್ಥಿಗಳು ದೃಢ ಮನಸ್ಸು ಮತ್ತು ಕಠಿಣ ಪರಿಶ್ರಮದಿಂದ ಯಾವುದೇ ಸಾಧನೆ ಮಾಡಲು ಸಾಧ್ಯವಿದೆ’ಎಂದು ಹೇಳಿದರು.
‘ನೀವು ಕೈಗೊಳ್ಳುವ ಸಂಶೋಧನೆಗಳಿಗೆ ಹೆಚ್ಚಿನ ವೆಚ್ಚ ಭರಿಸಬೇಕಾದ ಅವಶ್ಯಕತೆಯಿಲ್ಲ. ಕಡಿಮೆ ಖರ್ಚಿನಲ್ಲಿಯೂ ಸಹ ಉತ್ತಮ ಸಂಶೋಧನೆ ಮತ್ತು ಅನ್ವೇಷನೆಗಳನ್ನು ಮಾಡಲು ಸಾದ್ಯವಿದೆ ಎಂದರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿದ್ಯಾಶಂಕರ್ ಅವರು, ‘ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಿಂದ ಹೆಚ್ಚಿನ ಅವಕಾಶಗಳನ್ನು ಪಡೆದು ಭಾರತದ ಅಭಿವೃದ್ಧಿಗೆ ಕೊಡುಗೆ ನೀಡಲು ಸಹಕಾರಿ ಆಗಲಿದೆ. ಹೊಸ ಸ್ಟಾರ್ಟ್ ಅಪ್‌ಗಳನ್ನು ಉತ್ತೇಜಿಸುವುದರ ಜೊತೆಗೆ ನೂತನ ತಂತ್ರಜ್ಞಾನ ಮತ್ತು ಕೌಶಲಗಳ ಮಹತ್ವ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಮರ್ಸಿಡಿಸ್ ಬೆಂಜ್ ರಿಸರ್ಚ್ ಆ್ಯಂಡ್ ಡೆವೆಲಪ್‌ಮೆಂಟ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮನು ಸಾಲೆ, ಏಟ್ರಿಯಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸಿ.ಎಸ್.ಸುಂದರ್ ರಾಜು, ಎಬಿವಿಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಆಶಿಶ್ ಚೌಹಾಣ್, ಎಎಸ್‌ಕೆಬಿ ಚಾರಿಟಬಲ್ ಟ್ರಸ್ಟ್‌ನ ಟ್ರಸ್ಟಿ ಕೆ.ನಾಗರಾಜು, ಪ್ರಾಂಶುಪಾಲ ರಾಜೇಶ್.ಎಸ್, ಉಪ ಪ್ರಾಂಶುಪಾಲ ಎನ್.ನಳಿನಾಕ್ಷಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಿದ್ಧಪಡಿಸಿರುವ 350ಕ್ಕೂ ಹೆಚ್ಚು ಉತ್ತಮ ಪ್ರಾಜೆಕ್ಟ್‌ಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.