ADVERTISEMENT

ಇಬ್ಬರು ಐಎಎಸ್‌ ಅಧಿಕಾರಿಗಳಿಗೆ ಬಡ್ತಿ

​ಪ್ರಜಾವಾಣಿ ವಾರ್ತೆ
Published 21 ಜೂನ್ 2019, 19:59 IST
Last Updated 21 ಜೂನ್ 2019, 19:59 IST

ಬೆಂಗಳೂರು: ಇಬ್ಬರು ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಲಾಗಿದೆ.

ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಜಕುಮಾರ್ ಖತ್ರಿ ಅವರಿಗೆ ಬಡ್ತಿ ನೀಡಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಜನಸ್ಪಂದನ) ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಹಿಂದೆ ಹೊಂದಿರುವ ಕಂದಾಯ ಇಲಾಖೆಯ ಪ್ರಭಾರವನ್ನೂ ಕೊಡಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿದ್ದ ಪರಮೇಶ ಪಾಂಡೆ ಅವರನ್ನು ವರ್ಗಾವಣೆ ಮಾಡಲಾಗಿದೆ.

ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಸವರಾಜು ಅವರಿಗೆ ಬಡ್ತಿ ನೀಡಿ,ಅರಣ್ಯ ಮತ್ತು ಪರಿಸರ ಇಲಾಖೆಯ ಜವಾಬ್ದಾರಿ ನೀಡಲಾಗಿದೆ. ಹಿಂದೆ ಹೊಂದಿದ್ದ ಇಲಾಖೆಯ‍ಪ್ರಭಾರವನ್ನೂವಹಿಸಲಾಗಿದೆ. ಅರಣ್ಯ ಇಲಾಖೆ ಜವಾಬ್ದಾರಿ ಹೊತ್ತಿದ್ದ ಸಂದೀಪ್ ದವೆ ಅವರನ್ನು ವರ್ಗಾವಣೆ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.