ಬೆಂಗಳೂರು: ರಾಜ್ಯದ ಮೂವರು ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಗುಪ್ತದಳದ ಡಿಐಜಿ ಆಗಿದ್ದ ಎ.ಸುಬ್ರಹ್ಮಣೇಶ್ವರ್ ರಾವ್ ಅವರಿಗೆ ಐಜಿಪಿ ಹುದ್ದೆಗೆ ಬಡ್ತಿ ನೀಡಿ ಆಂತರಿಕ ಭದ್ರತಾ ವಿಭಾಗಕ್ಕೆ (ಐಎಸ್‌ಡಿ) ವರ್ಗಾಯಿಸಲಾಗಿದೆ.
ಸಿಐಡಿಯ ಎಸ್ಪಿ ಚಂದ್ರಗುಪ್ತ ಅವರನ್ನು ಕಾರಾಗೃಹ ಇಲಾಖೆಯ ಡಿಐಜಿ ಆಗಿ ಹಾಗೂ ಲೋಕಾಯುಕ್ತ ಎಸ್ಪಿ ಕೆ. ತ್ಯಾಗರಾಜನ್ ಅವರನ್ನು ಸಿಐಡಿಯ ಡಿಐಜಿ ಆಗಿ ಬಡ್ತಿ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.