ADVERTISEMENT

ಸರ್ಕಾರಿ ಪ್ರೌಢಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರಿಗೆ ಬಡ್ತಿ: ಎಸ್. ಸುರೇಶ್‌ಕುಮಾರ್

​ಪ್ರಜಾವಾಣಿ ವಾರ್ತೆ
Published 19 ಜೂನ್ 2021, 2:18 IST
Last Updated 19 ಜೂನ್ 2021, 2:18 IST
ಎಸ್‌.ಸುರೇಶ್‌ ಕುಮಾರ್
ಎಸ್‌.ಸುರೇಶ್‌ ಕುಮಾರ್   

ಬೆಂಗಳೂರು: ‘ಸರ್ಕಾರಿ ಪ್ರೌಢಶಾಲೆಗಳ 148 ದೈಹಿಕ ಶಿಕ್ಷಣ ಶಿಕ್ಷಕರಿಗೆ ಬಡ್ತಿ ನೀಡಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಹೇಳಿದ್ದಾರೆ. ‌

‘ಸರ್ಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಗ್ರೇಡ್-1 ಹುದ್ದೆಯಿಂದ ಗ್ರೂಪ್-ಬಿ ವೃಂದದ ದೈಹಿಕ ಶಿಕ್ಷಣ ಪರಿವೀಕ್ಷಕರ 148 ಹುದ್ದೆಗಳಿಗೆ ಮುಂಬಡ್ತಿಯನ್ನು ನೀಡಿ ಆದೇಶ ಹೊರಡಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಇದೇ 21ರಂದು ಕೌನ್ಸೆಲಿಂಗ್‌ ನಡೆಯಲಿದ್ದು, ದೈಹಿಕ ಶಿಕ್ಷಣ ಪರಿವೀಕ್ಷಕರು ತಮ್ಮ ಇಚ್ಛಾನುಸಾರ ಸ್ಥಳ ಆಯ್ಕೆ ಮಾಡಿಕೊಳ್ಳಬಹುದಾಗಿದೆ ಎಂದೂ ಸಚಿವರು ಹೇಳಿದ್ದಾರೆ.

ADVERTISEMENT

ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಬಡ್ತಿ ನೀಡಬೇಕೆಂಬುದು ಕರ್ನಾಟಕ ರಾಜ್ಯ ಸರ್ಕಾರಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಬೇಡಿಕೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.