ADVERTISEMENT

ಕಾಂಗ್ರೆಸ್ ಧ್ವಜವೇ ಧರ್ಮ: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2020, 23:10 IST
Last Updated 20 ಮಾರ್ಚ್ 2020, 23:10 IST
ಬೆಂಗಳೂರಿನಲ್ಲಿ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕಾರ್ಯಕರ್ತರ ಸಭೆ ನಡೆಸಿದರು.
ಬೆಂಗಳೂರಿನಲ್ಲಿ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕಾರ್ಯಕರ್ತರ ಸಭೆ ನಡೆಸಿದರು.   

ಬೆಂಗಳೂರು: ‘ಕಾಂಗ್ರೆಸ್ ಪಕ್ಷದ ಧ್ವಜವೇ ನನ್ನ ಧರ್ಮ. ಇಲ್ಲಿ ಯಾರೂ ಹೆಚ್ಚಲ್ಲ, ಯಾರೂ ಕಡಿಮೆ ಇಲ್ಲ. ಎಲ್ಲರೂ ಸಮಾನರು. ಇಲ್ಲಿ ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆಗೆ ಆದ್ಯತೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಶುಕ್ರವಾರ ಇಲ್ಲಿನ ಪಕ್ಷದ ಕಚೇರಿಯಲ್ಲಿ ಸುದೀರ್ಘ ಸಭೆ ನಡೆಸಿದ ಅವರು, ‘ಪಕ್ಷವನ್ನು ಕಟ್ಟಿ, ಗಟ್ಟಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದವರಿಗೆ ಅಧಿಕಾರ ತಾನಾಗಿಯೇ ಹುಡುಕಿಕೊಂಡು ಬರುತ್ತದೆ. ನೀವು ಅಧಿಕಾರದ ಹಿಂದೆ ಹೋಗುವ ಅಗತ್ಯವೇ ಇರುವುದಿಲ್ಲ. ಪಕ್ಷದಲ್ಲಿ ಶ್ರಮಕ್ಕೆ ಮಾತ್ರ ಬೆಲೆ ಇದೆಯೇ ಹೊರತು ಪ್ರಭಾವಕ್ಕೆ ನಾನು ಮಣಿಯುವುದಿಲ್ಲ. ಎಲ್ಲರನ್ನೂಒಟ್ಟಿಗೆ ಕೆರೆದುಕೊಂಡು ಹೋಗುವ ಸಂಕಲ್ಪ ನನ್ನದು’ ಎಂದರು.

‘ನನಗೆ ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಇದೆ. ಇಲ್ಲಿ ಯಾರೂ ಮೇಲಲ್ಲ, ಯಾರೂ ಕೀಳಲ್ಲ. ಎಲ್ಲರೂ ಸಮಾನರೆ’ ಎಂದರು.

ADVERTISEMENT

‘ಕಾರ್ಯಕರ್ತರು ಹಾಗೂ ನಾಯಕರು ಸಮಾನ ಭಾವದಿಂದ ದುಡಿಯುವ ಅವಶ್ಯಕತೆ ಇದೆ. ನಮ್ಮ ಸಾಮರ್ಥ್ಯ ಮತ್ತು ಶಕ್ತಿಯನ್ನು ಬಿಜೆಪಿ ವಿರುದ್ಧ ಹೋರಾಡಲು, ಪಕ್ಷವನ್ನು ಕಟ್ಟುವುದಕ್ಕಾಗಿ ವಿನಿಯೋಗವಾಗಬೇಕು. ಆ ಮೂಲಕ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.