ಬೆಂಗಳೂರು: ಗ್ರಾಹಕರಿಂದ ₹32.73 ಕೋಟಿ ಠೇವಣಿ ಸಂಗ್ರಹಿಸಿ ಬಡ್ಡಿಯನ್ನೂ ನೀಡದೆ, ಠೇವಣಿಯನ್ನೂ ಹಿಂತಿರುಗಿಸದೆ ವಂಚಿಸಿದ ಪ್ರಕರಣದಲ್ಲಿ ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಪ್ರಾಸಿಕ್ಯೂಷನ್ ದೂರು ದಾಖಲಿಸಿದೆ.
ಸಂಘದ ಅಧ್ಯಕ್ಷರಾಗಿದ್ದ ಬಿ.ವಿ. ಲಕ್ಷ್ಮೀನಾರಾಯಣ, ಅವರ ಪತ್ನಿ ರಾಧಿಕಾ ಮತ್ತು ಸಂಘದ ವ್ಯವಸ್ಥಾಪಕಿಯಾಗಿದ್ದ ಆಶಾ ರಾವ್ ವಿರುದ್ಧವೂ ಮಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ಇ.ಡಿ ದೂರು ದಾಖಲಿಸಿದೆ.
ಠೇವಣಿದಾರರ ಹಣವನ್ನು ದುರ್ಬಳಕೆ ಮಾಡಿಕೊಂಡು ಲಕ್ಷ್ಮೀನಾರಾಯಣ ತಮ್ಮ ಮತ್ತು ತಮ್ಮ ಪತ್ನಿ ರಾಧಿಕಾ ಹೆಸರಿನಲ್ಲಿ ಹಲವು ಸ್ಥಿರಾಸ್ತಿಗಳನ್ನು ಖರೀದಿಸಿದ್ದಾರೆ. ಆಶಾ ರಾವ್ ಸಹ ಸ್ಥಿರಾಸ್ತಿಗಳನ್ನು ಖರೀದಿಸಿದ್ದು, ರಾಜ್ಯ ಸರ್ಕಾರದ ಸಂಸ್ಥೆಗಳು ಈಗಾಗಲೇ ಅವುಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ ಎಂದು ಇ.ಡಿ ತಿಳಿಸಿದೆ.
ಈ ಅಕ್ರಮದಲ್ಲಿ ಇನ್ನಷ್ಟು ವ್ಯಕ್ತಿಗಳು ಭಾಗಿಯಾಗಿದ್ದು, ತನಿಖೆ ಮುಂದುವರೆದಿದೆ ಎಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.