ADVERTISEMENT

ಬೆಂಗಳೂರು | ವೇಶ್ಯಾವಾಟಿಕೆ: ಮಹಿಳೆ ವಿರುದ್ಧ ಎಫ್‌ಐಆರ್

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2025, 15:22 IST
Last Updated 2 ಫೆಬ್ರುವರಿ 2025, 15:22 IST
<div class="paragraphs"><p>ಎಫ್‌ಐಆರ್</p></div>

ಎಫ್‌ಐಆರ್

   

ಬೆಂಗಳೂರು: ಹೆಚ್ಚಿನ ವೇತನದ ಉದ್ಯೋಗ ಕೊಡಿಸುವುದಾಗಿ ಆಮಿಷ ಒಡ್ಡಿ ಹೊರ ಜಿಲ್ಲೆಗಳಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮಹಿಳೆಯ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜ್ಞಾನಭಾರತಿಯ ಉಪ್ಪಾರ್ ಲೇಔಟ್‌ನ ಬಾಡಿಗೆ ಮನೆಯಲ್ಲಿ ವಾಸವಿರುವ ಗಿರಿಜಾ ಅಲಿಯಾಸ್ ಗೀತಾ ಅವರ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ.

ADVERTISEMENT

‘ಉತ್ತಮ ಉದ್ಯೋಗ ಕೊಡಿಸುವುದಾಗಿ ಗಿರಿಜಾ, ಹೊರ ಜಿಲ್ಲೆಗಳಿಂದ ಹೆಣ್ಣು ಮಕ್ಕಳನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಲಭಿಸಿತು. ಈಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಪರಿಚಯದ ಪುರುಷರಿಗೆ ಹೆಣ್ಣುಮಕ್ಕಳ ಫೋಟೋವನ್ನು ವಾಟ್ಸ್‌ಆ್ಯಪ್‌ ಮೂಲಕ ಕಳಿಸಿ, ಹಣದ ವ್ಯವಹಾರ ಮಾಡುತ್ತಿದ್ದಳು ಹಾಗೂ ಅವರನ್ನು ಮನೆಗೆ ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಳು ಎಂಬುದು ಗೊತ್ತಾಗಿದೆ. ಹಾಗಾಗಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.