ADVERTISEMENT

ವೇಶ್ಯಾವಾಟಿಕೆ: ಇಂದಿರಾನಗರ, ಪುಟ್ಟೇನಹಳ್ಳಿ ಸ್ಪಾಗಳ ಮೇಲೆ ದಾಳಿ

​ಪ್ರಜಾವಾಣಿ ವಾರ್ತೆ
Published 12 ಜುಲೈ 2022, 3:06 IST
Last Updated 12 ಜುಲೈ 2022, 3:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು:ವೇಶ್ಯಾವಾಟಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಇಂದಿರಾನಗರ ಹಾಗೂ ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯ ಸ್ಪಾಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಎಂಟು ಮಹಿಳೆಯರನ್ನು ರಕ್ಷಿಸಿದ್ದಾರೆ.

‘ಜೆ.ಪಿ.ನಗರ 5ನೇ ಹಂತದ ಎಸ್‌ಎನ್‌ಬಿಆರ್ ಕಾಂಪ್ಲೆಕ್ಸ್‌ನಲ್ಲಿರುವ ‘ರೂಹಿ ಥೈ’ ಹಾಗೂ ಇಂದಿರಾನಗರ 100 ಅಡಿ ರಸ್ತೆಯಲ್ಲಿರುವ ‘ಐರಾ’ ಸ್ಪಾ ಮೇಲೆ ದಾಳಿ ಮಾಡಲಾಗಿದೆ. ಮೂವರು ಕೆಲಸಗಾರರು ಹಾಗೂ ನಾಲ್ವರು ಗ್ರಾಹಕರನ್ನು ಬಂಧಿಸಲಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.

‘ಥಾಯ್ಲೆಂಡ್‌ ಹಾಗೂ ಇತರೆಡೆ ಮಹಿಳೆಯರಿಗೆ ಉದ್ಯೋಗದ ಆಮಿಷವೊಡ್ಡಿ ನಗರಕ್ಕೆ ಕರೆಸಿಕೊಳ್ಳಲಾಗಿತ್ತು. ಅವರನ್ನೇ ವೇಶ್ಯಾವಾಟಿಕೆಗೆ ತಳ್ಳಲಾಗಿತ್ತು. ಮಸಾಜ್‌ ಹೆಸರಿನಲ್ಲಿ ಗ್ರಾಹಕರನ್ನು ಆಹ್ವಾನಿಸಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು’ ಎಂದೂ ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.