ADVERTISEMENT

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ಜಾಲ ಭೇದಿಸಿದ ಸಿಸಿಬಿ

ಅಪರಾಧ ಸುದ್ದಿ

​ಪ್ರಜಾವಾಣಿ ವಾರ್ತೆ
Published 23 ಮೇ 2020, 19:29 IST
Last Updated 23 ಮೇ 2020, 19:29 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಹೊರ ರಾಜ್ಯಗಳಿಂದ ಹುಡುಗಿಯರನ್ನು ಕರೆತಂದು ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳಿದ್ದ ಜಾಲವೊಂದನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಭೇದಿಸಿದ್ದಾರೆ.

ಮಾರತ್ತಹಳ್ಳಿಯ ಹೊರ ವರ್ತುಲ ರಸ್ತೆಯ ಬಳಿಯಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಹಿತಿ ಸಂಗ್ರಹಿಸಿದ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಪೊಲೀಸರು ಗುರುವಾರ ದಾಳಿ ನಡೆಸಿ ಹೊರರಾಜ್ಯದಿಂದ ಕರೆತಂದಿದ್ದ ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಕುಮಾರ್‌ (31) ಹಾಗೂ ರಂಗಸ್ವಾಮಿ (51) ಎಂಬುವರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ಸ್ವಾತಿ ಅಲಿಯಾಸ್‌ ಸರಸ್ವತಿ ಎಂಬುವರು ಪರಾರಿಯಾಗಿದ್ದಾರೆ. ಗಿರಾಕಿ ನಾಜಿಮ್‌ವುದ್ದೀನ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.

ADVERTISEMENT

ಆರೋಪಿಗಳಿಂದ ಮೂರು ಮೊಬೈಲ್‌ ಫೋನ್‌, ಸ್ವಲ್ಪ ಹಣ ಮತ್ತು ಕಾಂಡೋಮ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರು ತಮ್ಮ ಮೊಬೈಲ್‌ ಫೋನ್‌ಗಳ ಮುಖಾಂತರ ಹುಡುಗಿಯರ ಫೋಟೋ ಕಳುಹಿಸಿ ಗಿರಾಕಿಗಳನ್ನು ಸೆಳೆಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾರತ್ತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.